ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದ್ದು, ಇವಿಎಂ ಮತ ಎಣಿಕೆ ಬಳಿಕ ಅಂಚೆ ಮತಪತ್ರಗಳ ಎಣಿಕೆಯು ಸಹ ಬಹಳ ಜಾಗರೂಕತೆಯಿಂದ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಂಚೆ ಮತ ಎಣಿಕೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದರು.
ಇಂದು(ಮೇ.27) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಅಂಚೆ ಮತ ಎಣಿಕೆ ಅಧಿಕಾರಿ/ ಸಿಬ್ಬಂದಿಗಳಿಗೆ ಆಯೋಜಿಸಲಾಗಿದ್ದ ಚುನಾವಣಾ ತರಬೇತಿಯಲ್ಲಿ ಮಾತನಾಡಿದ ಅವರು, ಅಂಚೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಒಟ್ಟು 11 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್ ಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಅಂಚೆ ಮತ ಪತ್ರ ಎಣಿಕೆಯ ಸಹಾಯಕ ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅಂಚೆ ಮತ ಎಣಿಕೆಯು ಬಹಳ ಸೂಕ್ಷ್ಮವಾಗಿದ್ದು, ಎಲ್ಲಾ ಮತ ಎಣಿಕೆ ಅಧಿಕಾರಿಗಳು, ಮೇಲ್ವಿಚಾರಕರುಗಳು ಹಾಗೂ ಸಿಬ್ಬಂದಿಗಳು ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಮತ ಎಣಿಕೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತರಬೇತಿಯಲ್ಲಿ ಸರಿಯಾದ ಸಲಹೆ ಹಾಗೂ ಮಾರ್ಗದರ್ಶನವನ್ನು ಪಡೆಯಿರಿ. ಮತ ಎಣಿಕೆಯ ದಿನದಂದು ಕೌಂಟಿಂಗ್ ಟೇಬಲ್ ನ ಸಂಖ್ಯೆ, ಅಧಿಕಾರಿ ಹೆಸರು, ಎಣಿಕೆ ಮೇಲ್ವಿಚಾರಕರ ಹೆಸರು, ಪೋಸ್ಟಲ್ ಬ್ಯಾಲೆಟ್ ಬಂಡಲ್ ನ ಒಟ್ಟು ಸಂಖ್ಯೆಯನ್ನು ನೀಡಲಾಗುವ ನಮೂನೆಯಲ್ಲಿ ತಪ್ಪದೇ ನಮೂದಿಸಬೇಕು ಎಂದು ತಿಳಿಸಿದರು.
ಮತ ಎಣಿಕೆ ಮೇಲ್ವಿಚಾರಕರ ಜವಾಬ್ದಾರಿಯು ಬಹಳ ಮುಖ್ಯವಾಗಿದ್ದು, ಮತ ಎಣಿಕೆಯ ದಿನ ಎಲ್ಲಾ ಸಿಬ್ಬಂದಿಗಳು ನಿಗದಿಪಡಿಸುವ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಮತ ಎಣಿಕೆಯನ್ನು ನಿಖರವಾಗಿ ನಮೂದಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…