ಮಂಡ್ಯ

ಕುಡಿಯುವ ನೀರಿಗೆ ಕೊರತೆಯಾಗದಂತೆ ಎಚ್ಚರ ವಹಿಸಿ: ಡಿಸಿ ಸೂಚನೆ

ಮಂಡ್ಯ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಡಿಯುವ ನೀರನ್ನು ಟ್ಯಾಂಕರ್ ಹಾಗೂ ಖಾಸಗಿ ಬೋರ್ ವೆಲ್ ಮೂಲಕ ನೀರು ಒದಗಿಸುತ್ತಿರುವ ಗ್ರಾಮಗಳಿಗೆ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು‌ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.

ಜಿಲ್ಲೆಯಲ್ಲಿ ಕುಡಿಯುವ ನೀರು ಒದಗಿಸಲು ಕಳೆದ ಎರಡು ತಿಂಗಳಿನಿಂದ ಜೆ.ಜೆ.ಎಂ‌ ಹಾಗೂ ಕಂಟೆಜೆನ್ಸಿ ಯೋಜನೆಯಡಿ 164 ಹೊಸ ಬೋರ್ ವೆಲ್ ಗಳನ್ನು ಕೊರೆಯಲಾಗಿದೆ. ಕುಡಿಯುವ ನೀರಿನ ಅವಶ್ಯಕತೆಗೆ ಜಿಲ್ಲಾಡಳಿತ ನಿರಂತರವಾಗಿ ಸ್ಪಂದಿಸುತ್ತಿದ್ದು, ಸಾರ್ವಜನಿಕರು ಸಹ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ಕೆ. ಆರ್. ಪೇಟೆ ತಾಲ್ಲೂಕಿನ ಮುರುಗನಕೊಪ್ಪಲು ಹಾಗೂ ಹೊಸೂರು, ಮದ್ದೂರು ತಾಲ್ಲೂಕಿನ ಚಿಕ್ಕೋನಹಳ್ಳಿ, ಬಸರಾಳು ಮಂಡ್ಯ ತಾಲ್ಲೂಕಿನ ಪಂಚೆಗೌಡನಹಳ್ಳಿ, ತಿಮ್ಮನಹೊಸೂರು ಸೇರಿದಂತೆ ಒಟ್ಟು 6 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲಾಗುತ್ತಿದೆ ಎಂದು ಆಯಾ ತಾಲ್ಲೂಕಿನ ತಹಶೀಲ್ದಾರ್ ಸಭೆಗೆ ಮಾಹಿತಿ ಒದಗಿಸಿದರು.

ಉಪವಿಭಾಗಾಧಿಕಾರಿಗಳು ಟಾಸ್ಕ್ ಫೋಸ್೯ಸಮಿತಿ ಅಧ್ಯಕ್ಷರಾಗಿದ್ದು, ಪ್ರತಿವಾರ ಸಭೆ ನಡೆಸಿ ಕುಡಿಯುವ ನೀರಿನ ತೊಂದರೆ ಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗುವ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು ಯೋಜನೆಗಳನ್ನು ರೂಪಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅನಧಿಕೃತವಾಗಿ ಪಂಪ್ ಸೆಟ್ ಮೋಟರ್ ಬಳಸಿ ಕೆರೆಗಳಿಂದ ನೀರು ಪಡೆದು ಕೃಷಿ ಅಥವಾ ಅನ್ಯ ಉದ್ದೇಶಕ್ಕೆ ಬಳಸುತ್ತಿದ್ದರೆ ಮುಲಾಜಿಲ್ಲದೆ ಮೋಟರ್ ಗಳನ್ನು ಜಪ್ತಿ ಮಾಡಿಕೊಂಡು ಕ್ರಮಕೈಗೊಳ್ಳಿ. ಕುಡಿಯುವ ನೀರು ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವರಾಜು, , ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕಿ ತುಷಾರಮಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್‌ ಹೆಚ್ ನಿರ್ಮಲ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

6 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

7 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

7 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

7 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

8 hours ago