ಮಂಡ್ಯ

ಮುಂದಿನ ಸಾಹಿತ್ಯ ಸಮ್ಮೇಳನದ ಆತಿಥ್ಯ ಪಡೆದ ಬಳ್ಳಾರಿ

ಮಂಡ್ಯ: 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 66ವರ್ಷದ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಿದೆ.

ಶನಿವಾರ ರಾತ್ರಿ ಜರುಗಿನ ಕಸಾಪ ಪ್ರತಿನಿಧಿಗಳ ಸಭೆಯಲ್ಲಿ ಬಳ್ಳಾರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ನಡೆಸಲು ಸರ್ವಾನುಮತದಿಂದ ನಿರ್ಣಯಿಸಲಾಯಿತು.

86ನೇ ಸಾಹಿತ್ಯ ಸಮ್ಮೇಳನವು ಹಾವೇರಿಯಲ್ಲಿ ನಡೆದಿತ್ತು. ಈ ಬಾರಿ ಅಂದರೆ 87 ನೇ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದೆ. ಇಂದು (ಡಿ.22) ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲಿದೆ.

66 ವರ್ಷದ ನಂತರ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಈ ಹಿಂದೆ 1926, 1938, ಹಾಗೂ 1938 ರಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿತ್ತು.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅತಿತ್ಯ ವಹಿಸಲು ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಇನ್ನಿತರ ಜಿಲ್ಲೆಗಳು ಅರ್ಜಿ ಸಲ್ಲಿಸಿದ್ದವು. ಆದರೆ ಅಂತಿಮವಾಗಿ ಬಳ್ಳಾರಿ ಜಿಲ್ಲೆ ಆಯ್ಕೆ ಮಾಡಿ ಅತಿಥ್ಯ ನೀಡಲು ಎಲ್ಲಾ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.

ಇನ್ನು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಮುಗಿಯಲಿದ್ದು, ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್‌. ಆಶೋಕ್‌, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿವಹಿಸಲಿದ್ದಾರೆ. ಸಮ್ಮೇಳನದ ಅಧ್ಯಕ್ಷರಾದ ಡಾ. ಗೊ.ರು.ಚನ್ನಬಸಪ್ಪ ಹಾಗೂ ಕಸಾಪ ಅಧ್ಯಕ್ಷ ಡಾ. ಮಹೇಶ್‌ ಜೋಶಿ ಉಪಸ್ಥಿತರಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

9 mins ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

33 mins ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

38 mins ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

44 mins ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿದ ರಾಯ್‌ ಬರೇಲಿ ನ್ಯಾಯಾಲಯ

ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…

1 hour ago

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚು: ಮಕ್ಕಳನ್ನು ಕಾಡುತ್ತಿರುವ ಕಾಲು ಬಾಯಿ ರೋಗ

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…

1 hour ago