ಮಂಡ್ಯ

Accident: ಅಪರಿಚಿತ ವಾಹನ ಡಿಕ್ಕಿ ಮಹಿಳೆ ಸಾವು; ಹೆದ್ದಾರಿಯಲ್ಲಿ ಸ್ಥಳೀಯರಿಂದ ಪ್ರತಿಭಟನೆ

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಹನಕೆರೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಬಿ.ಗೌಡಗೆರೆ ಗ್ರಾಮದ ಜಿ.ಕೆ.ಕೆಂಪೇಗೌಡ ಎಂಬವರ ಪತ್ನಿ ಯಶೋದಮ್ಮ (೫೫) ಮೃತ ಮಹಿಳೆ. ಯಶೋದಮ್ಮ ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮಹಿಳೆಯರ ದೇಹ ಸಂಪೂರ್ಣ ಛಿದ್ರಗೊಂಡಿದೆ. ಘಟನೆಗೆ ಕಾರಣವಾದ ವಾಹನವನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಇದು ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆ ಹಿನ್ನಲೆಯಲ್ಲಿ ಸ್ಥಳೀಯರು ಹೆದ್ದಾರಿಯ ಎರಡೂ ಮಾರ್ಗಗಳಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಅಗತ್ಯ ಸ್ಥಳದಲ್ಲಿ ಅಂಡರ್‌ಪಾಸ್ ನಿರ್ಮಿಸಿಲ್ಲ. ಇದರಿಂದ ಸ್ಥಳೀಯರು ಹೆದ್ದಾರಿ ದಾಟಲು ತೊಂದರೆಯಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷದಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಕಿಡಿಕಾರಿದರು.

ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತಮ್ಮ ಸಿಟ್ಟು ಹೊರಹಾಕಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಡಿಸಿ, ಎಸ್ಪಿ ಆಗಮಿಸಿದ ಹೊರತು ಶವವನ್ನು ತೆಗೆಯಲು ಬಿಡದೆ ಕಿಡಿಕಾರಿದರು. ಇದರಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ತೆರಳಿ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿ ಮನವೊಲಿಸಿದರು. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

48 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago