Categories: ಮಂಡ್ಯ

ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ: ಎನ್ ಚಲುವರಾಯಸ್ವಾಮಿ

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-2024 ರ ಸಂಬಂಧ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇಂದು ಭೂಮಿ ಪೂಜೆಯನ್ನು ನೆರವೇರಿಸಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21 ಹಾಗೂ 22 ರಂದು 3 ದಿನಗಳ ಕಾಲ 87ನೇ ಮಂಡ್ಯದಲ್ಲಿ ನಡೆಯಲಿದೆ ಎಂದು ಈಗಾಗಲೇ ತೀರ್ಮಾನವಾಗಿದೆ. ಸಮ್ಮೇಳನಕ್ಕೆ ಕೇವಲ ಒಂದು ತಿಂಗಳು ಬಾಕಿ ಇದೆ. ವೇದಿಕೆ ನಿರ್ಮಾಣಕ್ಕೆ ಇಂದು ಭೂಮಿ ಪೂಜೆಯು ಯಾವುದೇ ವಿಘ್ನಗಳಿಲ್ಲದೆ ನೆರವೇರಿದ್ದು, ಇಂದಿನಿಂದ ವೇದಿಕೆ ನಿರ್ಮಾಣದ ಚಟುವಟಿಕೆಗಳು ಪ್ರಾರಂಭವಾಗಲಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಿರುವ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿರುವುದು ಬಹಳ ಸಂತೋಷದ ವಿಷಯವಾಗಿದೆ. ಅವರಿಗೆ ಕೇಂದ್ರ ಸಾಹಿತ್ಯ ಪರಿಷತ್ತು, ಜಿಲ್ಲಾಡಳಿತ ಹಾಗೂ ಮಂಡ್ಯ ಜಿಲ್ಲೆಯ ಪರವಾಗಿ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಿದರು.

ರಾಜ್ಯದ ವಿವಿಧ ಭಾಗಗಳಿಂದ ಎಲ್ಲಾ ಸಾಹಿತಿಗಳು, ಕನ್ನಡಾಭಿಮಾನಿಗಳು, ಕನ್ನಡ ಪರ ಹೋರಾಟಗಾರರು, ಕನ್ನಡ ಸಂಘಟನೆಗಳು ಹಾಗೂ ಅನೇಕ ಗಣ್ಯರು ಸಮ್ಮೇಳನಕ್ಕೆ ಆಗಮಿಸಲಿದ್ದಾರೆ. ಸಮ್ಮೇಳನದ ಜವಾಬ್ದಾರಿಯು ಕೇಂದ್ರ ಸಾಹಿತ್ಯ ಪರಿಷತ್ತು, ಜಿಲ್ಲಾ ಸಾಹಿತ್ಯ ಪರಿಷತ್ತು, ಸರ್ಕಾರ, ಜಿಲ್ಲಾಡಳಿತ, ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಮೇಲಿದ್ದು, ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಸಾಹಿತ್ಯ ಸಮ್ಮೇಳನಕ್ಕೆ ಸುಮಾರು 3 ಲಕ್ಷದಿಂದ 4 ಲಕ್ಷದವರೆಗೆ ಜನರು ಬರುತ್ತಾರೆ ಎಂದು ಅಂದಾಜಿಸಲಾಗಿದ್ದು, ಅವರಿಗೆ ಬರುವವರಿಗೆ ಊಟ, ಪಾರ್ಕಿಂಗ್ ವ್ಯವಸ್ಥೆ, ಘೋಷ್ಠಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಎಲ್ಲಾ ಸಮಿತಿಗಳೊಂದಿಗೆ ಚರ್ಚಿಸಿ ವೇದಿಕೆ ನಿರ್ಮಾಣದಿಂದ ಹಿಡಿದು ಸಮ್ಮೇಳನಕ್ಕೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆಯವರೆಗೂ ಕ್ರಿಯಾಯೋಜನೆಯ ಪ್ರಕಾರ ಕೆಲಸಗಳು ಜರುಗುತ್ತಿವೆ. ಸಮ್ಮೇಳನ ಬಹಳ ಅಚ್ಚುಕಟ್ಟಾಗಿ ನಡೆಯಲು ಎಲ್ಲರ ಸಹಕಾರವು ಮುಖ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಮಧು ಜಿ ಮಾದೇಗೌಡ, ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ ಎಂ ನರೇಂದ್ರಸ್ವಾಮಿ, ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್, ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಶಾಸಕ ಎಬಿ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಡಾ ಮೀರಾಶಿವಲಿಂಗಯ್ಯ, ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್ (ನಾಗೇಶ್), ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿ.ಡಿ ಗಂಗಾಧರ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

9 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

9 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

10 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

11 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

12 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

13 hours ago