ಮಂಡ್ಯ: ಪಿಎಸ್‌ಎಸ್‌ಕೆ ಕಂಪನಿಯು ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿ ಏಕಾಏಕಿ 45 ನೌಕರರನ್ನು ತೆಗೆದು ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಯಲ್ಲಿ ಪಾಂಡವಪುರ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯು ಒಂದು. ಆದರೆ ಈ ಕಾರ್ಖಾನೆ ನಷ್ಟದಲ್ಲಿ ಸಿಲುಕಿದೆ ಎಂಬ ಕಾರಣಕ್ಕೆ ಕಳೆದ ಐದು ವರ್ಷಗಳ ಹಿಂದೆ ಮಾಜಿ ಸಚಿವ ಮುರುಗೇಶ್ ನಿರಾಣಿಯವರ ನಿರಾಣಿ ಶುಗರ್ಸ್ ಕಂಪನಿಗೆ 40 ವರ್ಷಗಳ ಗುತ್ತಿಗೆ ನೀಡಲಾಗಿತ್ತು.
ಆ ವೇಳೆ ಒಂದಷ್ಟು ಷರತ್ತನ್ನು ಸಹ ವಿಧಿಸಲಾಗಿತ್ತು. ಅದರಲ್ಲಿ ಪ್ರಮುಖವಾಗಿ ಪಿಎಸ್‌ಎಸ್‌ಕೆ ಕಂಪನಿ ನೌಕರರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯಬಾರದೆಂದು ಒಪ್ಪಂದ ಹಾಕಿತ್ತು. ಆದರೆ ಈಗ ಸ್ಥಳೀಯ 45 ಮಂದಿ ಕಂಪನಿ ನೌಕರರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿ ದಬ್ಬಾಳಿಕೆ ನಡೆಸಿದೆ. ಇದರಿಂದ ಕೆಲಸ ಕಳೆದುಕೊಂಡ ನೌಕರರು ತೀವ್ರ ಆತಂಕದಲ್ಲಿದ್ದಾರೆ.
ನೌಕರರು ಕೆಲಸ ಕಳೆದುಕೊಂಡ ಹಿನ್ನೆಲೆಯಲ್ಲಿ ನೌಕರರ ಕುಟುಂಬವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುರುಗೇಶ್ ನಿರಾಣಿ ಮಾಲೀಕತ್ವದ ಕಂಪನಿ ವಿರುದ್ಧ ಎಲ್ಲೆಡೆ ಆಕ್ರೋಶ ಕೇಳಿಬಂದಿದೆ.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…
ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…