ಮಂಡ್ಯ: ನಿಂತಿದ್ದ ಲಾರಿ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ.
ಬೆಸಗರಹಳ್ಳಿಯ ಬಿ.ಎ ಮಧುಕುಮಾರ್ ಸಾವನ್ನಪ್ಪಿದವರು. ಮಧುಕುಮಾರ್ ಮಂಡ್ಯ ಪ್ರದೇಶಿಕ ದಿನಪತ್ರಿಕೆಯ ವರದಿಗಾರರಾಗಿದ್ದರು. ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರ ರಸ್ತಸ್ರಾವವಾಗಿದ್ದರು. ಸ್ಥಳೀಯರು ಮದ್ದೂರು ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.