ಮದ್ದೂರು : ಬೈಕ್ ಸವಾರರಿಬ್ಬರು ಅತಿ ವೇಗ, ಅಜಾಗರೂಕತೆಯಿಂದ ಕಾಲುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹೊಸಗಾವಿ ಬಳಿ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ.
ಕುಣಿಗಲ್ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಾಮಣ್ಣ (70), ಕೊಪ್ಪ ಹೋಬಳಿ ಸೋಮನಹಳ್ಳಿಯ ಭರತ ಬಿನ್ ರಾಜು (19) ಮೃತಪುಟ್ಟ ವ್ಯಕ್ತಿಗಳು.
ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಹೊಸಗಾವಿ ಕಡೆಯಿಂದ ಕೊಪ್ಪ ಹೋಬಳಿ ಸೋಮನಹಳ್ಳಿಗೆ ಬರುವಾಗ ನಾಲೆಯ ತಡೆಗೋಡೆಗೆ ಡಿಕ್ಕಿ ಹೊಡೆದು, ನಾಲೆಯ ಒಳಗೆ ಬಿದ್ದು, ತೀವ್ರವಾಗಿ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕೊಪ್ಪ ಆಸ್ಪತ್ರೆಯಲ್ಲಿ ಶವಾಗಾರದಲ್ಲಿ ಶವಗಳನ್ನು ಇಡಲಾಗಿದೆ.