ಕೆ.ಆರ್.ಪೇಟೆ : ತಾಲ್ಲೂಕಿನ ಕತ್ತರಘಟ್ಟ-ಹೊಸಹೊಳಲು ಮುಖ್ಯ ರಸ್ತೆಯ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬುಧವಾರ ನಡೆದಿದೆ.
ತಾಲ್ಲೂಕಿನ ಹೊಸಹೊಳಲು ಗ್ರಾಮದ ಬೈಕ್ ಸವಾರ ಬಾಲಕೃಷ್ಣ (55)ಅವರು ಸ್ಥಳದಲ್ಲಿಯೇ ಮೃತಪಟ್ಟವರು. ಮತ್ತೊಂದು ಬೈಕಿನ ಸವಾರ ದೊಡ್ಡಯಾಚೇನಹಳ್ಳಿ ಗ್ರಾಮದ ಟೈಲರ್ ಕೃಷ್ಣ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಕುರಿತು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಬಾಲಕೃಷ್ಣ ಅವರು ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಪುರಸಭಾ ಸದಸ್ಯ ಹೆಚ್.ಆರ್.ಲೋಕೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…