ಮಂಡ್ಯ

ಬೈಕ್‌ಗಳು ಮುಖಾಮುಕಿ : ಓರ್ವ ಸಾವು, ಮತ್ತೊರ್ವ ಗಂಭೀರ

ಕೆ.ಆರ್.ಪೇಟೆ : ತಾಲ್ಲೂಕಿನ ಕತ್ತರಘಟ್ಟ-ಹೊಸಹೊಳಲು ಮುಖ್ಯ ರಸ್ತೆಯ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬುಧವಾರ ನಡೆದಿದೆ.

ತಾಲ್ಲೂಕಿನ ಹೊಸಹೊಳಲು ಗ್ರಾಮದ ಬೈಕ್ ಸವಾರ ಬಾಲಕೃಷ್ಣ (55)ಅವರು ಸ್ಥಳದಲ್ಲಿಯೇ ಮೃತಪಟ್ಟವರು. ಮತ್ತೊಂದು ಬೈಕಿನ ಸವಾರ ದೊಡ್ಡಯಾಚೇನಹಳ್ಳಿ ಗ್ರಾಮದ ಟೈಲರ್ ಕೃಷ್ಣ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಕುರಿತು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಬಾಲಕೃಷ್ಣ ಅವರು ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಪುರಸಭಾ ಸದಸ್ಯ ಹೆಚ್.ಆರ್.ಲೋಕೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

55 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago