ಮಂಡ್ಯ: ಜಾರ್ಖಂಡ್‌ನ ಛೋಟಾ ನಾಗ್ಪುರ್ ಪ್ಲಾಟಿಯೊನಲ್ಲಿ ಜನಿಸಿದ ಒಬ್ಬ ಸಾಮಾನ್ಯ ಬುಡಕಟ್ಟು ಸಮುದಾಯದಲ್ಲಿ ಜನಿಸಿದ ಬಿರ್ಸಾ ಮುಂಡ ಅವರು ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಭಗವಾನ್ ಬಿರ್ಸಾ ಮುಂಡಾರವರ 150ನೇ ಜನ್ಮ ಜಯಂತಿ ಅಂಗವಾಗಿ 5ನೇ ವರ್ಷದ ಜನ ಜಾತಿಯ ಗೌರವ್ ದಿವಸ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿರ್ಸಾ ಮುಂಡ ಬುಡಕಟ್ಟು ಜನಾಂಗದ ಅತ್ಯಂತ ಮಹತ್ವ ಪೂರ್ಣ ಹಾಗೂ ಪ್ರಭಾವಶಾಲಿ ವ್ಯಕ್ತಿ ಎಂದು ಜಗತ್ತಿನಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.
ಛೋಟಾ ನಾಗ್ಪುರ್ ಪ್ಲಾಟಿಯೊನಲ್ಲಿ ಬ್ರಿಟಿಷ್ ಆಡಳಿತದಿಂದ ಬುಡಕಟ್ಟು ಸಮುದಾಯಕ್ಕೆ ಆಗುತ್ತಿದ್ದ ಅನ್ಯಾಯದ ವಿರುದ್ಧ ದ್ವನಿ ಎತ್ತಿದವರು ಬಿರ್ಸಾ ಮುಂಡ. ಬುಡಕಟ್ಟು ಸಮುದಾಯದ ಜನರು ಪ್ರಕೃತಿಯನ್ನು ದೇವರೆಂದು ಆರಾಧಿಸುತ್ತಾರೆ. ಪ್ರಕೃತಿ ಹಾಗೂ ಬುಡಕಟ್ಟು ಜನಾಂಗದವರು ನಡುವೆ ಅವಿನಾಭಾವ ಸಂಬಂಧವಿರುತ್ತದೆ ಎಂದು ಹೇಳಿದರು.
ಬ್ರಿಟಿಷ್ ಆಡಳಿತ ಭೂ ಕಂದಾಯ ಕಾಯ್ದೆ ತಂದಿದ್ದರಿಂದ ಬುಡಕಟ್ಟು ಸಮುದಾಯವನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿತ್ತು ಆದರೆ ಬಿರ್ಸಾ ಮುಂಡ ಅವರು ಬುಡಕಟ್ಟು ಸಮುದಾಯದ ಜನರನ್ನು ಒಗ್ಗೂಡಿಸಿ ಬ್ರಿಟೀಷರ ವಿರುದ್ದ ಸಮಾರ ಸಾರಿದರು ಎಂದು ತಿಳಿಸಿದರು.
ಇದನ್ನು ಓದಿ: ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
ಏನು ಇಲ್ಲದ ಒಬ್ಬ ಸಾಮಾನ್ಯ ಬುಡಕಟ್ಟು ಜನಾಂಗದ ಹುಡುಗ ಬ್ರಿಟಿಷ್ ಆಡಳಿತದ ವಿರುದ್ಧ ದಂಗೆ ಏಳಲು ಅವರ ಅಚಲವಾದ ದೃಢ ನಿರ್ಧಾರ, ದೃಢ ಸಂಕಲ್ಪ ಮತ್ತು ಇಚ್ಛಾ ಶಕ್ತಿ ನಮಗೆಲ್ಲರಿಗೂ ಪ್ರೇರಣೆ ಎಂದರು.
ಬಿರ್ಸಾ ಮುಂಡ ಅನೇಕರಿಗೆ ಮಾದರಿ ಅವರನ್ನು ನಾವು ಅನುಕರಣೆ ಮಾಡಬೇಕು. ಅನ್ಯಾಯ ನಿಮ್ಮಗೆ ಕಾಣಿಸಿದರೆ ಸಾಂವಿಧಾನಿಕವಾಗಿ ಅದರ ವಿರುದ್ಧ ಹೋರಾಡಬೇಕು. ಇಂತಹ ವ್ಯಕ್ತಿಗಳಿಂದ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದದ್ದು ತುಂಬಾ ಇದೆ ಎಂದು ಹೇಳಿದರು.
ಮಂಡ್ಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಮಂಜು ಅವರು ಮಾತನಾಡಿ 2021 ರಲ್ಲಿ ಕೇಂದ್ರ ಸರ್ಕಾರ ಬಿರ್ಸಾ ಮುಂಡ ಜನ್ಮದಿನಾಚರಣೆ ಆಚರಣೆ ಮಾಡಲು ಆದೇಶ ಹೊರಡಿಸಿತು, ಬಿರ್ಸಾ ಮುಂಡ ಆದಿವಾಸಿಗಳ ಆರಾಧ್ಯ ದೈವ ಆಗಿದ್ದರು. ಇತಿಹಾಸ ಪುಟಗಳಲ್ಲಿ ಚರಿತ್ರೆ ದಾಖಲಿಸಿದವರು ಭಗವಾನ್ ಬಿರ್ಸಾ ಮುಂಡ ಅವರು ಬದುಕಿದದ್ದು ಕೇವಲ 25 ವರ್ಷಗಳು ಮಾತ್ರ, 1894 ರಲ್ಲಿ ಬಿರ್ಸಾ ಮುಂಡ ಬ್ರಿಟಿಷ್ ಸೈನ್ಯದ ವಿರುದ್ಧ ಎಲ್ಲಾ ಬುಡಕಟ್ಟು ಸಮುದಾಯದ ಯುವಕರನ್ನು ಒಗ್ಗೂಡಿಸಿ ಬಹುದೊಡ್ಡ ಹೋರಾಟ ಕೈಗೊಂಡರು ಎಂದು ತಿಳಿಸಿದರು.
ಭಾರತದಲ್ಲಿ 600ಕ್ಕೂ ಹೆಚ್ಚು ಬುಡಕಟ್ಟು ಸಮುದಾಯಗಳಿವೆ ಸರ್ಕಾರ ಬುಡಕಟ್ಟು ಜನಾಂಗದ ಶಿಕ್ಷಣ, ಸಾಮಾಜಿಕ ಸ್ಥಿತಿ, ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.
ನಂತರ ಭಗವಾನ್ ಬಿರ್ಸಾ ಮುಂಡ ಅವರು 150 ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆ, ಚಿತ್ರ ಕಲೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಕೆ.ಆರ್.ನಂದಿನಿ ಅವರು ಪ್ರಮಾಣ ಪತ್ರ ನೀಡಿ ಗೌರವಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಕಾವ್ಯ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…