ಮಂಡ್ಯ

ಜನನ ಮರಣ ನೋಂದಣಿಯನ್ನು ಸಕಾಲದಲ್ಲಿ ಮಾಡಿ : ಜಿಲ್ಲಾಧಿಕಾರಿ ಡಾ ಎಚ್ ಎನ್ ಗೋಪಾಲ ಕೃಷ್ಣ

 ’ಮಂಡ್ಯ : ಜಿಲ್ಲೆಯಲ್ಲಿ  ಮರಣ ನೋಂದಣಿ ಅಧಿನಿಯಮ 1969 ರ ಪ್ರಕಾರ ನೋಂದಣಾಧಿಕಾರಿಗಳು/ ಉಪನೋಂಧಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವರದಿಯಾಗುವ ಜನನ, ನಿರ್ಜೀವ ಜನನ ಮತ್ತು ಮರಣ ಘಟನೆಗಳನ್ನು ನಿಗಧಿತ ಅವಧಿಯಲ್ಲಿ ನೊಂದಾಯಿಸಿ ಶೇ 100 ರ ಗುರಿ ಸಾಧಿಸಬೇಕು ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಗುವಿನ ಜನನದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ತಯಿಯ ಅಧಾರ್ ಕಾರ್ಡ್ ಸೇರಿದಂತೆ ಪೂರಕ ದಾಖಲಾತಿಗಳನ್ನು ಪಡೆದುಕೊಂಡು ವಿಳಂಬ ಮಾಡದೇ ಜನನದ ನೊಂದಣಿ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಜನನ ಪ್ರಮಾಣ ಪತ್ರ ಇಲ್ಲದ ಮಕ್ಕಳ ಪ್ರಮಾಣ ಬಹಳ ಕಡಿಮೆ ಇದೆ. ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುವಾಗ ಆಧಾರ್ ಸಂಖ್ಯೆಯನ್ನು ಕಡ್ಡಾಯ ಪಡೆಯಲಾಗುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳ ಬಳಿ ಜನನ ಪ್ರಮಾಣ ಪತ್ರ ಇಲ್ಲದಿದ್ದಾರೆ ಪರಿಶೀಲಿಸಿ ವರದಿ ನೀಡಬೇಕು ಎಂದರು.
ಈ-ಜನ್ಮ ತಂತ್ರಾಂಶದಲ್ಲಿ ವಿಳಂಬ ಒಂದು ವರ್ಷದೊಳಗೆ ಘಟಿಸಿದ ಘಟನೆಗಳನ್ನು ನೊಂದಣಿ ಮಾಡುವಾಗ ಗ್ರಾಮಾಂತರ ಪ್ರದೇಶದಲ್ಲಿ ತಹಶೀಲ್ದಾರ್, ನಗರ ಪ್ರದೇಶದಲ್ಲಿ ಆಯುಕ್ತರು/ ಮುಖ್ಯಾಧಿಕಾರಿಗಳ ಅದೇಶ ಪಡೆಯಬೇಕಿರುತ್ತದೆ. ಒಂದು ವರ್ಷದ ನಂತರ ಘಟನೆಗಳಿಗೆ ಜೆ.ಎಂ.ಎಫ್.ಸಿ ಮುಖಾಂತರ ಆದೇಶ ಪಡೆದು ನೊಂದಣಿ ಮಾಡಬೇಕಿರುತ್ತದೆ. ಕಡ್ಡಾಯವಾಗಿ ನಾಗರೀಕ ನೊಂದಣಿ ನಿಯಮದ ಸಂಖ್ಯೆ ನಮೂದಿಸಬೇಕಿರುತ್ತದೆ. ಇದನ್ನು ಪಾಲಿಸುವಂತೆ ಸೂಚನೆ ನೀಡಿದರು.
2015 ನೇ ಸಾಲಿಗೂ ಹಿಂದಿನ ಸಾಲುಗಳಲ್ಲಿ ಘಟಿಸಲಾದ ಜನನ, ಮರಣದ ನೊಂದಣಿಗಳನ್ನು ಡಿಜಿಟಲೈಸ್ ಮಾಡಿ ಈ- ಜನ್ಮ ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದ್ದು, ಇದಕ್ಕೆ ಬೇಕಿರುವ ಅಗತ್ಯ ಸಹಕಾರವನ್ನು ತಾಲ್ಲೂಕು ಮಟ್ಟದಲ್ಲಿ ಒದಗಿಸುವಂತೆ ತಿಳಿಸಿದರು.
ಬೆಳೆ ವಿಮಾ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಹೋಬಳಿವಾರು/ ಗ್ರಾಮ ಪಂಚಾಯಿತಿ ವಾರು ಬೆಳೆ ಕಟಾವು ಪ್ರಯೋಗಗಳನ್ನು ನಡೆಸಿ ಅದರ ವಿವರವನ್ನು ಅಪ್‍ಲೋಡ್ ಮಾಡುವ ಸಂದರ್ಭದಲ್ಲಿ ಛಾಯಚಿತ್ರ ಹಾಗೂ ವಿವರಗಳನ್ನು ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು ಎಂದು ತಿಳಿಸಿದರು.
11 ನೇ ಕೃಷಿ ಗಣತಿ : ಜಿಲ್ಲೆಯಲ್ಲಿ 11 ನೇ ಕೃಷಿ ಗಣತಿ ನಡೆಸಲು ವೇಳಪಟ್ಟಿಯನ್ನು ನಿಗಧಿಪಡಿಸಿ ಸರ್ಕಾರ ನೀಡಿರುವ ಸೂಚನೆಗಳನ್ವಯ ಪೂರ್ಣಗೊಳಿಸಬೇಕು. ಈ ಕೆಲಸ ತ್ವರಿತಗತಿಯಲ್ಲಿ ಆಗಬೇಕು ಎಂದರು. ಇದೇ ಸಂದರ್ಭದಲ್ಲಿ ಕೃಷಿ ಗಣತಿ 2021-22 ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್. ಎಲ್. ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ:ಧನಂಜಯ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಜಿಲ್ಲಾ ಸಂಖ್ಯ ಸಂಗ್ರಹಣಾಧಿಕಾರಿ ಶಿವಮ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

7 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

8 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

8 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

8 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

9 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

12 hours ago