ಮಂಡ್ಯ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ನಾಲ್ಕನೇ ದಿನವಾದ ಇಂದು ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ನಿಡಘಟ್ಟದಿಂದ ಪಾದಯಾತ್ರೆಯನ್ನು ಆರಂಭಿಸಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಈ ಚಳುವಳಿಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೆಜ್ಜೆ ಹಾಕೋಣ, ಭ್ರಷ್ಟ ಸರ್ಕಾರಕ್ಕೆ ಈ ಮೂಲಕ ಚುರುಕು ಮುಟ್ಟಿಸೋಣ ಎಂದು ಕರೆ ಕೊಟ್ಟಿದ್ದಾರೆ.
ಇಂದಿನ ಪಾದಯಾತ್ರೆಯಲ್ಲೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಿದ್ದಾರೆ.
ಇಂದಿನ ಪಾದಯಾತ್ರೆ ಮಾರ್ಗದಲ್ಲಿಯೂ ಕೂಡ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾರ್ಯಕರ್ತರನ್ನು ಉದ್ದೇಶಿಸಿ ಸಭೆ ನಡೆಸಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳನ್ನು ಕುರಿತು ಚರ್ಚೆ ನಡೆಸಲಿದ್ದಾರೆ.
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…