ಮಂಡ್ಯ: ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮದು ಜನಪರ ಸರ್ಕಾರ. ಯಾವುದೇ ಬಡವರ ಬಿಪಿಎಲ್ ಕಾರ್ಡ್ ರದ್ದಾಗಲ್ಲ. ಬಿಜೆಪಿಯವರು ಮುಂದಿನ ಗುರಿ ಬಗ್ಗೆ ತಿಳಿಸಲಿ. ಮೊಸರಲ್ಲಿ ಕಲ್ಲು ಹುಡುಕುವ ಬಿಡಲಿ ಎಂದು ಕುಟುಕಿದರು.
ಸುಮಲತಾ 5 ವರ್ಷ ಸಂಸದೆಯಾಗಿ ಬಹಳ ಕೆಲಸ ಮಾಡಿದ್ದಾರೆ. ಬಿಜೆಪಿ ಆಡಳಿತ ಕಾಲದಲ್ಲಿ ರೈತರಿಗೆ ಬಹಳಷ್ಟು ಅನ್ಯಾಯವಾಗಿದೆ. ಇದರ ಬಗ್ಗೆ ಸುಮಲತಾ ಹೋರಾಟ ಮಾಡಲಿ ಎಂದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…