ಮಂಡ್ಯ: ಹಳೆ ಮೈಸೂರಿನತ್ತ ಮೂರು ರಾಜಕೀಯ ಪಕ್ಷಗಳ ಕಣ್ಣು ಬಿದ್ದಿದೆ. ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದ್ದು, ತನ್ನ ಪ್ರಾಬಲ್ಯ ಸಾಧಿಸಲು ಬೇಕಾದ ತಂತ್ರಗಳನ್ನು ಈಗಿನಿಂದಲೇ ಆರಂಭಿಸಿದೆ. ಮುಂಬರುವ ವಿಧಾನಸಭೆ ಚುನಾವಣೆ ಜೊತೆ 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಸದೃಢಗೊಳಿಸಬೇಕು ಎಂಬ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಸೂಚನೆಯನ್ನು ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ.
ಹಳೆ ಮೈಸೂರು ಭಾಗದಲ್ಲಿ ಈ ಬಾರಿ ಶತಾಯ ಗತಾಯ ಕಮಲವನ್ನ ಅರಳಿಸಲೇ ಬೇಕೆಂದು ಬಿಜೆಪಿ ಹೈ ಕಮಾಂಡ್ ತೀರ್ಮಾನಿಸಿದೆ. ಈ ಹಿನ್ನಲೆ ಈಗಿನಿಂದಲೇ ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಬಿಜೆಪಿ ಸಿದ್ದತೆಯನ್ನ ನಡೆಸಿದೆ.
ಮುಂಬರುವ ವಿಧಾನಸಭೆ ಚುನಾವಣೆ 2024ರ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಆಗಿದ್ದು, ಕೇಂದ್ರ ಸಚಿವ ಕ್ರಿಷನ್ ಪಾಲ್ ಗುರ್ಜರ್ ಗೆ ಮಂಡ್ಯ ಜಿಲ್ಲೆಯ ಹೊಣೆಯನ್ನ ನೀಡಲಾಗಿದೆ. ಬಿಜೆಪಿ ಮಂಡ್ಯ ಜಿಲ್ಲಾದ್ಯಕ್ಷ ಉಮೇಶ್ ಅವರ ಮೇಲೆ ಪಕ್ಷ ಸಂಘಟನೆಯ ಹೊಣೆಯನ್ನ ಹೊರಿಸಲಾಗಿದೆ.
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು…
• ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪಟ್ಟಣ ಅಭಿವೃದ್ಧಿಯಾದಂತೆ ಕಳ್ಳತನವೂ ಹೆಚ್ಚಳ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ…
ವಡೆಯನಪುರ ಸಮೀಪದ ಕೆರೆ ಒಡೆಯುವ ಆತಂಕ; ಏರಿಯನ್ನು ದುರಸ್ತಿಪಡಿಸಲು ಒತ್ತಾಯ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ವಡೆಯನಪುರದ ಸಮೀಪವಿರುವ…
• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…
ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…
• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…