ಮಂಡ್ಯ: ಅಲ್ಪಸಂಖ್ಯಾತರ ಓಲೈಕೆ ಮಾಡಿ, ರೈತರನ್ನು ಕಡೆಗಣಿಸಿರುವ ರಾಜ್ಯ ಬಜೆಟ್ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಾಮ ಬಳಿದುಕೊಂಡು ಶಂಕ-ಜಾಗಟೆ ಬಾರಿಸಿ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.
ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಮಾತನಾಡಿ, ಮುಲ್ಲಾಗಳು ಹಾಗೂ ಮುಸ್ಲಿಂ ಧಾರ್ಮಿಕ ಮುಖಂಡರುಗಳಿಗೆ ಗೌರವ ಧನ 6 ಸಾವಿರ ರೂ. ಹೆಚ್ಚಳ ಮಾಡಿರುವ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ಕಾಲೋನಿಗಳು ಹಾಗೂ ಬಡಾವಣೆ ಅಭಿವೃದ್ಧಿಗೆ 1 ಸಾವಿರ ಕೋಟಿ ನೀಡಿದ್ದಾರೆ. ಹೆಚ್ಚುವರಿ ಉರ್ದು ಶಾಲೆಗಳ ನಿರ್ಮಾಣಕ್ಕೆ ಹಾಗೂ ಉತ್ತೇಜನಕ್ಕಾಗಿ 100 ಕೋಟಿ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು
ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಮಾತನಾಡಿ, ಮೇಕೆದಾಟು ಮಾಡಿ ದೊಡ್ಡ ಹಂಗಾಮ ಸೃಷ್ಠಿಸಿದ್ದ ಕಾಂಗ್ರೆಸ್ ಪಕ್ಷ, ಈ ಬಾರಿಯ ಬಜೆಟ್‌ನಲ್ಲಿ ಆ ಯೋಜನೆಗೆ ನಯಾ ಪೈಸೆ ಸಹ ಇಟ್ಟಿಲ್ಲ ಇದು ಇವರ ಬದ್ಧತೆಯೇ ಎಂದು ಪ್ರಶ್ನಿಸಿದರು.
ನಂದಿನಿ ಹಾಲಿನ ಪ್ರೋತ್ಸಾಹ ಧನವನ್ನು 5 ರಿಂದ 7 ರೂ.ಗಳಿಗೆ ಏರಿಕೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದರು. ಆದರೆ, ಈವರೆಗೂ ಅದು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.
ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಗಳಾ ಮಾತನಾಡಿ, ಅಲ್ಪಸಂಖ್ಯಾತ ಮಹಿಳೆಯರ ಸರಳ ವಿವಾಹಕ್ಕೆ 50 ಸಾವಿರ ರೂ.ಗಳವರೆಗೆ ಅನುದಾನ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇತರೆ ವರ್ಗದ ಜನರಿಗೆ ಅನ್ಯಾಯ ಮಾಡಿದ್ದಾರೆ. ಸಮ ಸಮಾಜ ನಿರ್ಮಾಣ ನಮ್ಮ ಕನಸು ಎನ್ನುವ ಮುಖ್ಯಮಂತ್ರಿಗಳು ಎಲ್ಲಿ ಸಮ ಸಮಾಜ ನಿರ್ಮಾಣ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿವೇಕ್, ಮುಖಂಡರಾದ ಯೋಗೇಶ್, ಆನಂದ್, ಶಿವಣ್ಣ, ಪ್ರಸನ್ನಕುಮಾರ್, ಚಂದ್ರು, ಶಿವಕುಮಾರ್, ಶಿವಲಿಂಗಯ್ಯ, ಶಿವಕುಮಾರ್ ಆರಾಧ್ಯ, ಜ್ಯೋತಿ, ಶ್ವೇತಾ, ಲಕ್ಷ್ಮಿ ವಸಂತ್, ಮಳವಳ್ಳಿ ಕೃಷ್ಣ, ಧನಂಜಯ, ನಾಗಾನಂದ, ಎಂ.ಸಿ. ಸಿದ್ದು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…