ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಹಾಡ್ಲಿ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಶವವನ್ನು ಅರೆಬರೆ ಸುಟ್ಟು ಹಾಕಿರುವ ಕೃತ್ಯವೊಂದು ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಹಾಡ್ಲಿ ಗ್ರಾಮದ ಸುಶೀಲಮ್ಮ ಕೋಂ ಲೇಟ್ ಸಿದ್ದೇಗೌಡ ರವರ ನೀಲಿಗಿರಿ ಜಮೀನಿನ ಆಜು-ಬಾಜಿನಲ್ಲಿ ಕುರಿ ಮೇಯಿಸುತ್ತಿದ್ದವರಿಗೆ ಸುಟ್ಟು ಅರ್ಧ ಬೆಂದ ಮೃತದೇಹ ಇರುವುದು ಗೊತ್ತಾಗಿದೆ. ಅವರು ತಕ್ಷಣ ಹಲಗೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ತಕ್ಷಣಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್ ಮತ್ತು ಸಬ್ ಇನ್ಸ್ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಬೆರಳು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .
ಮಂಡ್ಯ ಜಿಲ್ಲಾ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ, ಎ.ಎಸ್.ಪಿ. ಸಿ.ಈ.ತಿಮ್ಮಯ್ಯ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳ ಶೋಧನೆಯಲ್ಲಿ ತೊಡಗಿದ್ದಾರೆ.





