ಮಂಡ್ಯ

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ಕಳೆದ ಫೆಬ್ರವರಿ 16ರಂದು ಇದೇ ರೀತಿಯ ಬೆದರಿಕೆ ಬಂದಿದ್ದು, ಇದೀಗ ಮತ್ತೆ ಪುನರಾವರ್ತನೆಯಾಗಿದೆ.

ಬೆದರಿಕೆ ಇ-ಮೇಲ್ ಬಂದ ತಕ್ಷಣವೇ ಕೋರ್ಟ್ ಆವರಣದಲ್ಲಿ ಆತಂಕ ಹೆಚ್ಚಾಗಿದೆ. ವಕೀಲರು ಕಲಾಪ ನಿಲ್ಲಿಸಿ ಹೊರಗೆ ಬಂದಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಸೇರಿ ಕೋರ್ಟ್ ಆವರಣದಲ್ಲಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಅಗ್ನಿಶಾಮಕ ದಳವೂ ಸ್ಥಳದಲ್ಲಿದೆ.

ಬೆದರಿಕೆಯ ನಡುವೆಯೂ ಕೆಲವು ಕಲಾಪಗಳು ಮುಂದುವರಿದಿದ್ದರೂ, ಬಹುತೇಕ ವಕೀಲರು ಹಾಗೂ ಸಾರ್ವಜನಿಕರು ಆವರಣದಿಂದ ಹೊರಬಂದಿದ್ದಾರೆ. ಪೊಲೀಸರು ಇ-ಮೇಲ್‌ನ ಮೂಲ ಟ್ರೇಸ್ ಮಾಡುವ ಕೆಲಸ ಆರಂಭಿಸಿದ್ದಾರೆ.

ಫೆಬ್ರವರಿ 16ರಂದು ಸಹ ಬಂದಿತ್ತು ಬೆದರಿಕೆ
ಕಳೆದ ಫೆಬ್ರವರಿ 16ರಂದು ಧಾರವಾಡ ಹೈಕೋರ್ಟ್ ಪೀಠ ಸೇರಿದಂತೆ ಮಂಡ್ಯ, ಹಾವೇರಿ, ಕೊಡಗು, ದಾವಣಗೆರೆ ಸೇರಿ 10ಕ್ಕೂ ಹೆಚ್ಚು ನ್ಯಾಯಾಲಯಗಳಿಗೆ ಒಂದೇ ದಿನ ಇ-ಮೇಲ್ ಬಾಂಬ್ ಬೆದರಿಕೆ ಬಂದಿತ್ತು. ಆಗಲೂ ಬಾಂಬ್ ಸ್ಕ್ವಾಡ್, ಶ್ವಾನ ದಳದಿಂದ ಶೋಧ ನಡೆದು ಎಲ್ಲಾ ಬೆದರಿಕೆಗಳು ಹುಸಿ ಎಂದು ದೃಢಪಟ್ಟಿತ್ತು. ಆದರೆ ಈಗ ಮತ್ತೆ ಮಂಡ್ಯ ಕೋರ್ಟ್‌ಗೆ ಪುನರಾವರ್ತನೆಯಾಗಿದೆ.

ಪೊಲೀಸ್ ತನಿಖೆ ತೀವ್ರಗೊಂಡಿದೆ. ಬೆದರಿಕೆಯ ಮೂಲ ಗುರುತಿಸಲು ಸೈಬರ್ ಸೆಲ್ ಕೂಡ ಸಕ್ರಿಯವಾಗಿದೆ. ಕೋರ್ಟ್ ಕಲಾಪಗಳು ಸುರಕ್ಷತಾ ಕಾರಣದಿಂದ ಸ್ಥಗಿತಗೊಂಡಿವೆ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

14 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

36 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

50 mins ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

1 hour ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

2 hours ago

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…

2 hours ago