ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತಾಲೂಕಿನ ಗಂಟಗೌಡನಹಳ್ಳಿ ಗೇಟ್ ಬಳಿ ಇಂದು ಮಧ್ಯಾಹ್ನ ನಡೆದಿದೆ.
ತಾಲೂಕಿನ ಸಾತನೂರು ಗ್ರಾಮದ ಭೈರೇಶ್ (೧೮) ತರುಣ್ (೧೮) ಹಾಗೂ ಮತ್ತೋರ್ವ ಅಪ್ರಾಪ್ತ ಬಾಲಕನನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ, ಅವರಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ತಾಲೂಕಿನ ಹೊಳಲು ಸಮೀಪದ ಚಂದಗಾಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಆರೋಪಿಗಳು ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅವರನ್ನು ಹಿಡಿಯಲು ಯತ್ನಿಸಿದಾಗ ಎಲ್ಲರೂ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಅವರನ್ನು ಹಿಂಭಾಲಿಸಿಕೊಂಡು ಬರುವ ವೇಳೆ ಗಂಟಗೌಡನಹಳ್ಳಿ ಗೇಟ್ ಸಮೀಪ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸುವಾಗ ಸಿಕ್ಕಿ ಬಿದ್ದಿದ್ದಾರೆ.
ತಕ್ಷಣ ಅವರನ್ನು ಹಿಡಿದು ಗ್ರಾಮಸ್ಥರೊಂದಿಗೆ ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ನಂತರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ಪಿಎಸ್‌ಐ ಕಾಶಿನಾಥ್ ಬುಗಲಿ ಮತ್ತು ಸಿಬ್ಬಂದಿ ಧಾವಿಸಿ ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಭೈರೇಶ್, ತರುಣ್ ಅವರುಗಳು ತಾಲೂಕಿನ ತಂಗಳಗೆರೆ, ಉಪ್ಪರಕನಹಳ್ಳಿ, ದ್ಯಾಪಸಂದ್ರ, ಮಾಯಪ್ಪನಕೊಪ್ಪಲು ಸೇರಿದಂತೆ ವಿವಿಧೆಡೆ ಕಳ್ಳತನ ನಡೆಸಿದ್ದಾರೆ ಎಂದು ಹೇಳಲಾಗಿದೆ. ವಿಚಾರಣೆ ನಂತರ ಸತ್ಯಾಂಶ ಹೊರಬರಲಿದೆ. ಈ ಸಂಬಂಧ ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…