Mysore
23
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್‌ ಎಂಬಾತನೇ ಮೃತ ಬಾಲಕನಾಗಿದ್ದಾನೆ.

ಭಾನುವಾರ ಮಧ್ಯಾಹ್ನ ಈಜಾಡಲು ತೆರಳಿದ್ದ ಪೃಥ್ವಿನ್‌ ಸಂಜೆಯಾದರೂ ಮನೆಗೆ ಬರಲಿಲ್ಲ. ಬಳಿಕ ಪೋಷಕರು ಶೋಧ ನಡೆಸಿದ್ದರು. ಇಂದು ಬೆಳಿಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಹಲಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!