Mysore
27
scattered clouds

Social Media

ಶನಿವಾರ, 17 ಜನವರಿ 2026
Light
Dark

ಆಸ್ತಿ ವಿಚಾರವಾಗಿ ಜಗಳ: ಅಣ್ಣನಿಂದಲೇ ತಮ್ಮನ ಹತ್ಯೆ

Living together couple murders 2 children

ಮಂಡ್ಯ: ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದು, ಅಣ್ಣನಿಂದಲೇ ತಮ್ಮ ಕೊಲೆಯಾಗಿರುವ ಘಟನೆ ಜಿಲ್ಲೆಯ ಮಾಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಯೋಗೇಶ್(‌35) ಕೊಲೆಯಾದ ವ್ಯಕ್ತಿಯಾಗಿದ್ದು, ಲಿಂಗರಾಜು ಎಂಬಾತನೇ ತಮ್ಮನನ್ನು ಕೊಲೆಗೈದು ಪರಾರಿಯಾಗಿರುವ ಆರೋಪಿಯಾಗಿದ್ದಾನೆ.

ಲಿಂಗರಾಜುಗೆ ಆತನ ಮಕ್ಕಳಾದ ಭರತ್‌, ದರ್ಶನ್‌ ಎಂಬುವವರು ಸಾಥ್‌ ನೀಡಿದ್ದಾರೆ. ಕೊಲೆ ಬಳಿಕ ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಕೆರಗೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!