Mysore
20
mist

Social Media

ಶುಕ್ರವಾರ, 02 ಜನವರಿ 2026
Light
Dark

ಹಳೇ ದ್ವೇಷ: ಯುವಕನ ಮೇಲೆ ಭೀಕರ ಹಲ್ಲೆ

ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಐದು ಮಂದಿಯ ಗುಂಪು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಉದಯಗಿರಿ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಉದಯಗಿರಿ ಬಡಾವಣೆಯ ಕಿರಣ್ ಅಲಿಯಾಸ್ ಮರಿಕೆರೆ (೨೬) ಎಂಬಾತನೇ ತೀವ್ರವಾಗಿ ಹಲ್ಲೆಗೊಳಗಾಗಿ ಆಸ್ಪತೆಯಲ್ಲಿ ಸಾವು ಬದುಕಿನೊಂದಿಗೆ ಹೋರಾಟ ನಡೆಸುತ್ತಿದ್ದಾನೆ.

ಈತನ ಮೇಲೆ ನಗರದ ವರ್ಧನ್, ವರುಣ್, ಮನು, ಗೋವಿಂದರಾಜು, ಮದನ್ ಅವರು ಹಲ್ಲೆ ಮಾಡಿದ ಆರೋಪಿಗಳಾಗಿದ್ದಾರೆ.

ಹಲ್ಲೆಗೊಳಗಾದ ಕಿರಣ್ ಮತ್ತು ವರ್ಧನ್ ಇಬ್ಬರೂ ನಗರದಲ್ಲಿ ತಳ್ಳುವ ಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ಆಗಾಗ್ಗೆ ಸಣ್ಣಪುಟ್ಟ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಕಿರಣ್ ಇತ್ತೀಚೆಗೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ, ಕಳೆದ ಎರಡು ಮೂರು ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ. ಮತ್ತೆ ಗಲಾಟೆ ಮಾಡಿಕೊಂಡಿದ್ದ ಕಿರಣನನ್ನು ಹತ್ಯೆ ಮಾಡಲು ವರ್ಧನ್ ಯೋಜನೆ ರೂಪಿಸಿದ್ದ. ಅದರಂತೆ ಗೋಡನ್‌ನಲ್ಲಿ ಮಲಗಿದ್ದ ಕಿರಣ್ ಮೇಲೆ ವರ್ಧನ್ ಮತ್ತು ಇತರರು ಮಚ್ಚು, ಲಾಂಗುಗಳಿಂದ ತಲೆ, ಕೈ, ಕಾಲು ಇತರೆ ಕಡೆಗಳಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ಗೋಡನ್‌ನಲ್ಲೇ ಮಲಗಿದ್ದ. ಆತನಿಗೆ ಊಟ ಕೊಡಲು ಬಂದವರು ಕಿರಣ್ ಗಾಯಗೊಂಡಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುವನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ತಿಮ್ಮಯ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಪೂರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:
error: Content is protected !!