ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್ ರೈಡ್ಸ್) ನಡೆಯಲಿದ್ದು, ಈ ಸಂಬಂಧ ಗುರುವಾರ(ಇಂದು) ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿ, ಹೆಲಿಪ್ಯಾಡ್ ಸ್ಥಳದಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಆಯೋಜಕರಿಗೆ ಸೂಚನೆ ನೀಡಿದರು.
ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಸುರಕ್ಷತೆ, ವಾಹನ ನಿಲುಗಡೆ, ಮತ್ತು ತುರ್ತು ಸೇವೆಗಳ ಲಭ್ಯತೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.





