ಮಂಡ್ಯ

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ ಕಾಲ ಪ್ರದರ್ಶನ ಇರುತ್ತದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಇಂದು ಬೂದನೂರು ಉತ್ಸವ 2026ರ ಪ್ರಯುಕ್ತ ಚಿಕ್ಕ ಮಂಡ್ಯದಲ್ಲಿ ಹೆಲಿಕಾಪ್ಟರ್ ರೈಡ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಜೊತೆಗೆ ಜಿಲ್ಲೆಯ ಸಾರ್ವಜನಿಕರ ನೂತನವಾಗಿ ಕಾರ್ಯಕ್ರಮವನ್ನು ಮಾಡುವ ನಿಟ್ಟಿನಲ್ಲಿ ಬೂದನೂರು ಉತ್ಸವ ಪ್ರಯುಕ್ತ ಹೆಲಿ ಟೂರಿಸಂ ಅನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಬೂದನೂರು ಉತ್ಸವವನ್ನು ಮೊದಲನೇ ವರ್ಷ ತುಂಬಾ ಯಶಸ್ವಿಯಾಗಿ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಬಹಳ ವಿಭಿನ್ನವಾಗಿ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಬೂದನೂರು ಉತ್ಸವ -2026 ರ ಪ್ರಯುಕ್ತ ಏರ್ಪಡಿಸಲಗಿದ್ದ ವಿವಿಧ ರೀತಿಯ ಕ್ರೀಡೆ ಮತ್ತು ರಂಗೋಲಿ ಸ್ಪರ್ಧೆಗಳ ಕಾರ್ಯಕ್ರಮಗಳು ಬಹಳ ಯಶಸ್ವಿಯಾಗಿ ಪೂರ್ಣಗೊಂಡವೆ ಎಂದು ಹೇಳಿದರು.

ಮಾರ್ಚ್ 7 ರಂದು ಜಿಲ್ಲಾಡಳಿತ ವತಿಯಿಂದ “ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು ಮತ್ತು ಅಸ್ಪೃಶ್ಯತಾ ನಿವಾರಣಾ ಕಾಯ್ದೆ” ಅರಿವು ಕಾರ್ಯಾಗಾರವನ್ನು ನಗರದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಸಮಾಜದ ಎಲ್ಲಾ ವರ್ಗದವರು ಮತ್ತು ಮುಖಂಡರುಗಳು ಕಾರ್ಯಗಾರ ಕಾರ್ಯಕ್ರಮಕ್ಕೆ ಭಾವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಾಸಕ ಪಿ.ರವಿಕುಮಾರ್, ಕೆ. ಎಂ ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಪೊಲೀಸ್ ಅಧೀಕ್ಷಕಿ ವಿ.ಜೆ.ಶೋಭಾ ರಾಣಿ, ಉಪ ವಿಭಾಗ ಅಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ವಿಶ್ವನಾಥ್ ಇನ್ನಿತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago