ಮಂಡ್ಯ

ಬೂದನೂರು ಗ್ರಾ.ಪಂ | ಕಸ ವಿಲೇವಾರಿ ಆಟೋ ತೊಳೆದು ವಿನೂತನ ಪ್ರತಿಭಟನೆ

ಮಂಡ್ಯ: ಬೂದನೂರು ಗ್ರಾಮ ಪಂಚಾಯತಿ ಕಸ ವಿಲೇವಾರಿಗೆ ಖರೀದಿಸಿದ ಆಟೋ ಬಳಕೆ ಮಾಡದೇ 4 ವರ್ಷಗಳಿಂದ ತುಕ್ಕು ಹಿಡಿಯುತ್ತಿರುವುದನ್ನು ವಿರೋಧಿಸಿ ಬೂದನೂರು ನಾಗರೀಕರು ಆಟೋ ತೊಳೆದು, ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ ಮಾಡಿದರು.

ಗ್ರಾಮ ಪಂಚಾಯತಿ ಕಚೇರಿ ಬಳಿ ಜಮಾಯಿಸಿದ ಮಹಿಳೆಯರು ಆಟೋ ತೊಳೆದು, ಅರಿಸಿನ ಕುಂಕುಮ ಹಚ್ಚಿ ಹೂ ಮುಡಿಸಿ ಗಂಧದ ಕಡ್ಡಿ, ಕರ್ಪೂರ ಹಚ್ಚಿ ಪೂಜೆ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.

ಐದಾರು ಲಕ್ಷ ರೂ. ಕೊಟ್ಟು 2021ರಲ್ಲಿ ಖರೀದಿಸಿದ ಆಟೋವನ್ನು ಗ್ರಾಮಸಭೆ ಡಂಗೂರ, ಬೀದಿ ದೀಪ ಅಳವಡಿಸಲು ಮುಂತಾಗಿ ಖಾಸಗಿ ಬಳಕೆ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದರು.

4 ವರ್ಷಗಳಲ್ಲಿ 2200 ಕಿ.ಮೀ ಬಳಕೆ ತೋರುತ್ತಿರುವ ಆಟೋ ಮೀಟರ್ ಗೆ ವಿಮೆ, ಸರ್ವೀಸ್ ಮುಂತಾಗಿ ಹೆಚ್ಚುವರಿ ವೆಚ್ಚ ಭರಿಸಲಾಗುತ್ತಿದೆ‌ ಎಂದು ಆರೋಪಿಸಿದರು.

ಈ ಹಿಂದಿನ ಆಡಳಿತ ಮಂಡಳಿ ಘನತ್ಯಾಜ್ಯಕ್ಕೆ ಭೂಮಿ ನಿಗದಿ, ಪ್ರತಿ ಮನೆಗೆ ಕಸ ಸಂಗ್ರಹಕ್ಕೆ ಬಕೆಟ್ ನೀಡಿದೆ. ಅಲ್ಲದೆ ಸಾಮಾಗ್ರಿ ಖರೀದಿಗೆ ಬ್ಯಾಗ್ ವಿತರಿಸಿದೆ. ಪ್ರಸ್ತುತ ಆಡಳಿತ ಮಂಡಳಿ ಕಸ ವಿಲೇವಾರಿಗೆ ಅಗತ್ಯ ವೈಜ್ಞಾನಿಕ ಕ್ರಮ ಅನುಸರಿಸುತ್ತಿಲ್ಲ ಎಂದು ದೂರಿದರು.

ಕೂಡಲೇ ಕಸ ವಿಲೇವಾರಿಗೆ ಕ್ರಮ ವಹಿಸದಿದ್ದಲ್ಲಿ ಗ್ರಾಮ ಪಂಚಾಯತಿ ಕಚೇರಿ ಮುಂದೆ ಕಸ ಸುರಿಯುವ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಗ್ರಾಪಂ ಮಾಜಿ ಸದಸ್ಯರಾದ ಕುಳ್ಳ, ಸತೀಶ್ ಬೂಸ, ಸವಿತಾ, ಸುಧಾ, ಎಲ್ಲಮ್ಮ ಮೊದಲಾದವರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

1 hour ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

1 hour ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

1 hour ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

12 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

12 hours ago