ಮಂಡ್ಯ: ಮಳವಳ್ಳಿ ತಾಲ್ಲೂಕಿನ ಕಲ್ಕುಣಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಬೌದ್ಧ ಅಂಬೇಡ್ಕರ್ ಮಹಾದ್ವಾರ ಉದ್ಘಾಟನೆ ಮಾಡಿದರು.
ಮಳವಳ್ಳಿ ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ಬೌದ್ಧ ಅಂಬೇಡ್ಕರ್ ಮಹಾದ್ವಾರ, ಭಗವಾನ್ ಗೌತಮ ಬುದ್ಧ, ರಾಜರ್ಷಿ ಕೃಷ್ಣರಾಜ ಒಡೆಯರ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಕ್ರಿಯಾ ಖಾನ್, ಯುವ ಜನತಾದಳ ಮುಖಂಡ ಸುಹಾಸ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ನಂಜುಂಡಸ್ವಾಮಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.



