ಮಂಡ್ಯ : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಹೆದ್ದಾರಿಯಲ್ಲಿಯೇ ಹೊತ್ತಿ ಉರಿದಿದೆ. ಅದೃಷ್ಟವಶಾತ್ 25 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಟೋಲ್ ಬಳಿ ಜರುಗಿದೆ.
ಇಂದು ಮುಂಜಾನೆ 5 ಗಂಟೆ ವೇಳೆಯಲ್ಲಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಬಸ್ ಚಲಿಸುತ್ತಿತ್ತು. ಈ ವೇಳೆ ಕದನಹಳ್ಳಿ ಟೋಲ್ ಬಳಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಸ್ವಲ್ಪ ಸಮಯದಲ್ಲೇ ಬಸ್ ಧಗಧಗಿಸಿ ಹೊತ್ತಿ ಉರಿದಿದೆ. ನೋಡ ನೋಡುತ್ತಿದಂತೆ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾವಾಗಿದೆ.
ಚಾಲಕನ ಸಮಯ ಪ್ರಜ್ಞೆಯಿಂದಾಗಿ, ಬಸ್ ನಲ್ಲಿದ್ದ 25 ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿದ್ದಾರೆ. ಎಲ್ಲಾ ಪ್ರಯಾಣಿಕರು ಲಗೇಜ್ ಸಹಿತ ಬಸ್‌ನಿಂದ ಕೆಳಗೆ ಇಳಿದಿದ್ದಾರೆ.
ಈ ಸಂಬಂಧ ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…