Mysore
23
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

ರಾಷ್ಟ್ರೀಯ ಹೆದ್ದಾರಿಯಲ್ಲಿ ಹಳ್ಳಕ್ಕೆ ಬಿದ್ದ ಬಸ್ : ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮಂಡ್ಯ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ ಕೆಎಸ್ಆರ್ ಟಿಸಿ ಬಸ್ ಬಿದ್ದಿದ್ದು, ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮಾರೇಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ.

ತಲಕಾಡು ಕಡೆಯಿಂದ ಮಳವಳ್ಳಿ ಕಡೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಬಸ್ ಜಖಂಗೊಂಡಿದೆ.

ಸ್ಥಳದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಸೂಚನಾಫಲಕ ಹಾಕದೆ ಇರುವುದು ಈ ಅನಾಹುತಕ್ಕೆ ಕಾರಣವಾಗಿದೆ, ಕಾಮಗಾರಿ ಮಾಡುತ್ತಿರುವವರ ನಿರ್ಲಕ್ಷ್ಯತೆಯಿಂದ ಈ ಅನಾಹುತ ನಡೆದಿದ್ದು, ಯಾವುದೇ ಸೂಚನಾ ಫಲಕ ಹಾಕದಿರುವುದೇ ಈ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!