Mysore
33
scattered clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಚಲಿಸುತ್ತಿದ್ದ ಬಸ್‌ಗೆ ಬೆಂಕಿ-ಪ್ರಯಾಣಿಕರು ಪಾರು: 30 ಲಕ್ಷ ನಷ್ಟ

ಮಂಡ್ಯ: ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಭಸ್ಮಗೊಂಡಿರುವ ಘಟನೆ ತಾಲ್ಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಅಶೋಕ್ ಟ್ರಾವೆಲ್ಸ್‌ ಏಜೆನ್ಸಿಗೆ ಸೇರಿದ ಬಸ್‌ನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಬಸ್‌ನ್ನು ಚಾಲಕ ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಹೊರಗಿಳಿಸಿದ್ದಾರೆ.

ಪ್ರಯಾಣಿಕರು ಬಸ್‌ನಿಂದ ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಹೆಚ್ಚಾದ ಪರಿಣಾಮ ಕ್ಷಣಾರ್ಧದಲ್ಲಿ ಬಸ್ಸು ಬೆಂಕಿಗೆ ಆಹುತಿಯಾಗಿದೆ. ಪ್ರಯಾಣಿಕರ ಬಟ್ಟೆ ಬರೆ, ಡೆಕೋರೇಷನ್ ವಸ್ತುಗಳು, ಬಸ್ಸಿನ ಬಿಡಿ ಭಾಗಗಳು ಸೇರಿದಂತೆ ಇತರೆ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಅಷ್ಟರಲ್ಲಾಗಲೇ ಬಸ್ಸು ಬಹುತೇಕ ಸುಟ್ಟು ಕರಕಲಾಗಿತ್ತು. ಘಟನೆಯಿಂದಾಗಿ ಸುಮಾರು 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags: