ಮಂಡ್ಯ: ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಮದ್ದೂರಿನ ಗೆಜ್ಜಲಗೆರೆ ಬಳಿ ಸಂಭವಿಸಿದೆ. ಪರಿಣಾಮ ಚಾಲಕ ಸಾವನ್ನಪ್ಪಿದ್ದಾನೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಗಿನ ಜಾವ 5;30ಕ್ಕೆ ಕೇರಳಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸುತ್ತಿದ್ದು, ಈ ಅವಘಡಕ್ಕೆ ಕಾರಣ ಎಂದು ಪ್ರಯಾಣಿಕರು ತಿಳಿಸಿದ್ದಾರೆ.
ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.