ಮಂಡ್ಯ

ದೇಶದ ಸಂಪತ್ತು ಹಂಚಿಕೆ ವೈಫಲ್ಯದ ಫಲವೇ ಬಂಡವಾಳ ಶಾಹಿ ಫೈನಾನ್ಸ್‌ ಕಿರುಕಳ: ದಸಂಸ

ಮಂಡ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅವೈಜ್ಞಾನಿಕ ಆರ್ಥಿಕ ನೀತಿ ಹಾಗೂ ವಿದ್ಯೆ, ಅಧಿಕಾರ ಸಂಪತ್ತು, ಭೂಮಿ, ಉದ್ಯೋಗ, ಕೈಗಾರಿಕೆಗಳು ಸಮಾನವಾಗಿ ಹಂಚಿಕೆ ಮಾಡುವ ವೈಫಲ್ಯದ ಫಲವಾಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್‌ಗಳು ರಾಜ್ಯದ ಬಡ ಜನತೆಯ ಮೇಲೆ ದೌರ್ಜನ್ಯ ನಡೆಸುತ್ತಿವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಖಂಡನೆ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಪಿಮುಷ್ಠಿಗೆ ಸಿಲುಕಿ ಸಾಲಗಾರರಾಗಿರುವುದು ೭೬ ವರ್ಷ ನಮ್ಮನ್ನಾಳಿದ ಸರ್ಕಾರಗಳ ಸಾಧನೆಯಾಗಿದೆ. ಇದರಿಂದಾಗಿ ಬಡತನ, ಆರ್ಥಿಕ ಹೀನತೆ ಮಿತಿ ಮೀರಿದ್ದು, ಕೊಲೆ, ಸುಲಿಗೆ, ದೌರ್ಜನ್ಯ, ಆತ್ಮಹತ್ಯೆಯಂತಹ ಕೃತ್ಯಗಳು ನಡೆಯುವಂತಾಗಿದೆ ಎಂದರು.

ಇದಕ್ಕೆ ಪ್ರತಿಕೂಲವೆಂಬಂತೆ ಜಾತಿ ವರದಿಜಾರಿ, ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡದ ಕೇಂದ್ರ ಸರ್ಕಾರವು ನಾನು ಘೋಷಿಸಿದ ಬಜೆಟ್‌ನಲ್ಲಿ ರೈತ, ಕಾರ್ಮಿಕ, ಶೋಷಿತ, ಕೆಳಸಮುದಾಯ ವಿರೋಧಿತನವನ್ನು ತೋರುತ್ತಿದೆ. ಅಲ್ಲದೇ ಈ ಬಜೆಟ್ ಎಸ್ಸಿ ಎಸ್ಟಿ ವಿರೋಧಿ ಬಜೆಟ್ ಆಗಿದೆ ಎಂದು ಕಿಡಿ ಕಾರಿದರು.

ದೇಶ, ರಾಜ್ಯದಲ್ಲಿಯೂ ಸಹ ಶಿಕ್ಷಣ ಮತ್ತು ಆರೋಗ್ಯ ಸೇವೇ ವ್ಯಾಪಾರಿಕರಣಗೊಳಿಸಿ ಸಂವಿಧಾನ ವಿರೋಧಿ ಕೃತ್ಯ ವೆಸಗಿರುವ ಕೇಂದ್ರ ಸರ್ಕಾರ ಸಂವಿಧಾನಾತ್ಮಕವಾಗಿ ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ ನೀಡಲು ಎಷ್ಟೇ ಒತ್ತಾಯಿಸಿದರು, ಸ್ಪಂಧಿಸದೇ ಇರುವುದನ್ನು ಕದಸಂಸ ಖಂಡಿಸುತ್ತದೆ ಎಂದು ಹೇಳಿದರು.

ಮೈಸೂರು ವಿಭಾಗೀಯ ಸಂಚಾಲಕ ಕೆ.ಎಂ.ಅನಿಲ್‌ಕುಮಾರ್ ಮಾತನಾಡಿ, ಸರ್ಕಾರ ಖಾಸಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್‌ಗಳನ್ನು ಕೂಡಲೇ ಬಂದ್ ಮಾಡಿಸಬೇಕು, ಕಿರುಕುಳ ನೀಡುವ ಫೈನಾನ್ಸ್ ಮಾಲೀಕರು ಹಾಗೂ ಸಿಬ್ಬಂದಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು.

ಬಡ್ಡಿ, ಚಕ್ರ ಬಡ್ಡಿ ಮೂಲಕ ವಸೂಲಿ ಮಾಡಿದ ಹಣವನ್ನು ಮುಟಟುಗೋಲು ಹಾಕಿಕೊಂಡು ಸಂತ್ರಸ್ಥ ಕುಟುಂಬಕ್ಕೆ ಹಿಂದಿರುಗಿಸಬೇಕು. ಸಾಲ ವಸೂಲಾತಿ ಉಪಟಳದಿಂದ ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಮೈಕ್ರೋ ಫೈನಾನ್ಸ್ ಕಂಪನಿಗಳಿಂದಲೇ ತಲಾ ೫೦ ಲಕ್ಷ ಪರಿಹಾರ ನೀಡಲು ಕ್ರಮ ವಹಿಸಬೇಕು, ಮೈಕ್ರೋ ಫೈನಾನ್ಸ್‌ಗಳ ಸಾಲವನ್ನು ಕೇಂದ್ರ, ರಾಜ್ಯಸರ್ಕಾಗಳೇ ತುಂಬಿ ಜನರನ್ನು ಋಣ ಮುಕ್ತರಾಗಿಸಬೇಕು, ಜನರ ಜೀವ ಮತ್ತು ಮೂಲಭೂತ ಅವಶ್ಯಕತೆಗಳ ಸಂರಕ್ಷಣಾ ಕಾಯ್ದೆ ಜಾರಿಗೆ ಕೂಡಲೇ ಸುಘ್ರೀವಾಜ್ಞೆ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಆನಂದ್, ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತ ಆನಂದ್, ತಿಮ್ಮೇಶ್, ಸುಮಾಮಣಿ, ಮುತ್ತುರಾಜು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

6 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

6 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

6 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

6 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

8 hours ago