ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಹರಳಹಳ್ಳಿ ಗ್ರಾಮದಲ್ಲಿನ ಪೆಟ್ರೋಲ್ ಬಂಕ್ ಹಿಂಬದಿಯಲ್ಲಿರುವ ರೈತ ಬೋರಲಿಂಗೇಗೌಡ ಎಂಬವರ ಜಮೀನಿನಲ್ಲಿ ಚಿರತೆ ಬೋನಿಗೆ ಸೆರೆಯಾಗಿದೆ.
ಹಲವು ದಿನಗಳಿಂದ ಜಾನುವಾರುಗಳನ್ನು ತಿಂದು ಉಪಟಳ ನೀಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಭಾನುವಾರ ರಾತ್ರಿ ಬೋನಿಟ್ಟು ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಿರತೆಯನ್ನು ಹಿಡಿದು ಗ್ರಾಮಸ್ಥರ ಆತಂಕ ದೂರ ಮಾಡಿರುವ ಅರಣ್ಯ ಇಲಾಖೆಯ ತಾಲ್ಲೂಕು ಅಧಿಕಾರಿ ಅನಿತಾ, ನಂದಕುಮಾರ್ ತಂಡವನ್ನು ಹರಳಹಳ್ಳಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.





