ಮಂಡ್ಯ: ಪ್ರಾಜೆಕ್ಟ್ ವರ್ಕ್ ಜೊತೆಯಲ್ಲಿ ಪ್ರವಾಸ ಮಾಡಲೆಂದು ಹೊರಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬೋಸೆಗೌಡನದೊಡ್ಡಿ ಬಳಿ ನಡೆದಿದೆ.
ಅತಿವೇಗದಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನೊಳಗಿದ್ದ ನಾಲ್ವರಲ್ಲಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರನ್ನು ಪ್ರಣವ್, ಆಕಾಶ್, ಆದರ್ಶ್ ಎಂದು ಗುರುತಿಸಲಾಗಿದ್ದು, ಪೃಥ್ವಿ ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಮಳವಳ್ಳಿ ಗ್ರಾಮಾಂತರ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಘಟನೆ ಸಂಬಂಧ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರಿನ ಕಡೆಗೆ ತೆರಳುತ್ತಿದ್ದರು. ಎದುರಿಗೆ ಬಂದ ಲಾರಿಯೊಂದು ಕೆಎಸ್‌ಆರ್‌ಟಿಸಿ ಬಸ್ ಓವರ್‌ಟೇಕ್ ಮಾಡಿ ಕಾರಿಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಿದರು.
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಬಂಧನ ಹಾಗೂ ಬಿಡುಗಡೆಗೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಸರ್ಕಾರದ…
ಮೈಸೂರು: ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಮಾಗಿ ಉತ್ಸವಕ್ಕೆ ಚಾಲನೆ…