ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವೈಶಾಲಿ ಹೋಟೆಲ್ ಸಮೀಪ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲ ಬಿಇಒಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಒಂದಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಅಪಘಾತದ ಬಳಿಕ ಗಾಯಗೊಂಡಿರುವ ಅಧಿಕಾರಿಗಳನ್ನು ಚನ್ನಪಟ್ಟಣದ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಮೈಸೂರು ತಾಲೂಕಿನ ಬಿಇಒ ಪ್ರಕಾಶ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯ ಸಾರ್ವಜನಿಕರು ಹಾಗೂ ಇತರ ವಾಹನ ಸವಾರರ ನೆರವಿನಿಂದ ವಾಹನದಲ್ಲಿ ಸಿಲುಕಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಯಿತು.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…