Mysore
29
overcast clouds

Social Media

ಭಾನುವಾರ, 14 ಜೂನ್ 2026
Light
Dark

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅನಾಹುತದಿಂದ ಪಾರಾಗಿದ್ದಾರೆ.

ಘಟನೆಯು ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಕೇರಳದಿಂದ ಮಂಡ್ಯ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಆಘಾತದಿಂದ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಡೆಗೋಡೆ ಮತ್ತು ಚರಂಡಿಗೆ ನುಗ್ಗಿ ನಿಂತಿದೆ.

ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಅಪಘಾತದ ನಂತರ ಹೆದ್ದಾರಿ ಪೊಲೀಸ್ ಮತ್ತು ಆಂಬುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿ, ಕ್ರೇನ್ ಸಹಾಯದಿಂದ ವಾಹನಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಈ ಅಪಘಾತದಿಂದ ಕೆಲಕಾಲ ಹೆದ್ದಾರಿ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.

ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!