ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅನಾಹುತದಿಂದ ಪಾರಾಗಿದ್ದಾರೆ.
ಘಟನೆಯು ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಕೇರಳದಿಂದ ಮಂಡ್ಯ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಆಘಾತದಿಂದ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಡೆಗೋಡೆ ಮತ್ತು ಚರಂಡಿಗೆ ನುಗ್ಗಿ ನಿಂತಿದೆ.
ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಅಪಘಾತದ ನಂತರ ಹೆದ್ದಾರಿ ಪೊಲೀಸ್ ಮತ್ತು ಆಂಬುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿ, ಕ್ರೇನ್ ಸಹಾಯದಿಂದ ವಾಹನಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಈ ಅಪಘಾತದಿಂದ ಕೆಲಕಾಲ ಹೆದ್ದಾರಿ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…