ಶ್ರೀರಂಗಪಟ್ಟಣ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಹೊತ್ತಿ ಉರಿದಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಸಂಪೂರ್ಣ ಭಸ್ಮವಾಗಿದೆ. ರಾಜಸ್ಥಾನ ಮೂಲದ ವಿಕ್ಕಿ ಮತ್ತು ಸ್ನೇಹಿತರು ತಮಿಳುನಾಡಿನಲ್ಲಿ ಸ್ನೇಹಿತನ ಕಾರು ಪಡೆದು ರಾಜ್ಯ ಪ್ರವೇಶಿಸಿ ವ್ಯಾಪಾರದ ಹಿನ್ನೆಲೆಯಲ್ಲಿ ಮೈಸೂರಿಗೆ ತೆರಳುತ್ತಿದ್ದರು.
ಗಣಂಗೂರು ಬಳಿ ಹೊಗೆ ಕಾಣಿಸಿಕೊಂಡಿದ್ದು ಗೌಡಹಳ್ಳಿ ಗೆಟ್ ಬಳಿ ಬೆಂಕಿ ಹೊತ್ತಿಕೊಂಡಿದೆ, ತಕ್ಷಣ ಕಾರಿನಲ್ಲಿದ್ದ ಮೂವರು ಕೆಳಗೆ ಇಳಿದಿದ್ದು, ಬೆಂಕಿಯ ಜ್ವಾಲೆ ಹೆಚ್ಚಾಗಿ ಕಾರು ಸಂಪೂರ್ಣ ಸುಟ್ಟುಹೋಗಿದೆ,
ಕಾರಿನಲ್ಲಿದ್ದ ಎಲ್ಲರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.ಶ್ರೀರಂಗಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.