ಮಂಡ್ಯ : ಜಿಲ್ಲೆಯಲ್ಲಿ ಒಂದೇ ದಿನ ಮತ್ತೊಂದು ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ 25 ಅಡಿ ಆಳದ ವಿಸಿ ನಾಲೆಗೆ ಕಾರು ಬಿದ್ದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟುಂಬ ಕಾರಿನಲ್ಲಿ ಪಾಂಡವಪುರದ ಕಡೆ ತೆರಳುತ್ತಿತ್ತು. ಕಾರನ್ನು ಅತಿ ವೇಗವಾಗಿ ಚಲಾಯಿಸುತ್ತಿದ್ದರಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಬಳಿಯ ವಿಸಿ ನಾಲೆಗೆ ಬಿದ್ದಿದೆ.
ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದಿದ್ದರಿಂದ ಕಾರು ಮುಳುಗಿಲ್ಲ. ಅವಘಡ ಕಂಡ ಮಾಚಹಳ್ಳಿ ಗ್ರಾಮಸ್ಥರು ಕೂಡಲೆ ಸ್ಥಳಕ್ಕೆ ಧಾವಿಸಿದ್ದಾರೆ. ನಂತರ ಕಾರಿನಲ್ಲಿದ್ದ ನಾಲ್ಕು ಜನರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.