ಮಂಡ್ಯ

ಜನಗಣತಿ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜನಗಣತಿ ಕಾರ್ಯವು ರಾಷ್ಟçದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಗಣತಿ ಕಾರ್ಯದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಜನಗಣತಿಯು ದೇಶದ ಅತಿದೊಡ್ಡ ಸಾರ್ವಜನಿಕ ಅಭ್ಯಾಸ ಚಟುವಟಿಕೆಯಾಗಿದ್ದು, ದೇಶದಲ್ಲಿ ಅತ್ಯಂತ ತಳಮಟ್ಟದಿಂದ ಮಾಹಿತಿ ಸಂಗ್ರಹಿಸುವ ಏಕೈಕ ಕಾರ್ಯಕ್ರಮವಾಗಿದೆ. ಮುಂದಿನ ೧೦ ವರ್ಷಗಳ ಕಾಲ ದೇಶದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಈ ದಾಖಲೆ ಬಳಕೆಯಾಗಲಿದ್ದು, ಗಣತಿ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಅತ್ಯಂತ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಈ ಬಾರಿಯ ಜನಗಣತಿಯು ಸ್ವತಂತ್ರ ನಂತರ ನಡೆಯುತ್ತಿರುವ 8ನೇ ಜನಗಣತಿಯಾಗಿದ್ದು, ಡಿಜಿಟಲ್‌ ಮೋಡ್‌ನಲ್ಲಿ ನಡೆಯುತ್ತಿರುವ ಮೊದಲ ಗಣತಿಯಾಗಿದೆ. ಜನಗಣತಿಯು ಎರಡು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ 2026ರ ಏಪ್ರಿಲ್‌ 16ರಿಂದ ಮೇ.15ರವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ. ಎರಡನೇ ಹಂತದ ಜನಗಣತಿಯೂ 2027ರ ಫೆಬ್ರವರಿ.1 ರಿಂದ ಫೆಬ್ರವರಿ.28ರವರೆಗೆ ನಡೆಯಲಿದೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

5 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

5 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

5 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

6 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

6 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

6 hours ago