ಮಂಡ್ಯ: ಜನಗಣತಿ ಕಾರ್ಯವು ರಾಷ್ಟçದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಗಣತಿ ಕಾರ್ಯದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಜನಗಣತಿಯು ದೇಶದ ಅತಿದೊಡ್ಡ ಸಾರ್ವಜನಿಕ ಅಭ್ಯಾಸ ಚಟುವಟಿಕೆಯಾಗಿದ್ದು, ದೇಶದಲ್ಲಿ ಅತ್ಯಂತ ತಳಮಟ್ಟದಿಂದ ಮಾಹಿತಿ ಸಂಗ್ರಹಿಸುವ ಏಕೈಕ ಕಾರ್ಯಕ್ರಮವಾಗಿದೆ. ಮುಂದಿನ ೧೦ ವರ್ಷಗಳ ಕಾಲ ದೇಶದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಈ ದಾಖಲೆ ಬಳಕೆಯಾಗಲಿದ್ದು, ಗಣತಿ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಅತ್ಯಂತ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಈ ಬಾರಿಯ ಜನಗಣತಿಯು ಸ್ವತಂತ್ರ ನಂತರ ನಡೆಯುತ್ತಿರುವ 8ನೇ ಜನಗಣತಿಯಾಗಿದ್ದು, ಡಿಜಿಟಲ್ ಮೋಡ್‌ನಲ್ಲಿ ನಡೆಯುತ್ತಿರುವ ಮೊದಲ ಗಣತಿಯಾಗಿದೆ. ಜನಗಣತಿಯು ಎರಡು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ 2026ರ ಏಪ್ರಿಲ್ 16ರಿಂದ ಮೇ.15ರವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ. ಎರಡನೇ ಹಂತದ ಜನಗಣತಿಯೂ 2027ರ ಫೆಬ್ರವರಿ.1 ರಿಂದ ಫೆಬ್ರವರಿ.28ರವರೆಗೆ ನಡೆಯಲಿದೆ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…