Mysore
18
broken clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ವಿಸಿ ನಾಲೆಗೆ ಕಾರು ಬಿದ್ದ ಪ್ರಕರಣ: ಮತ್ತೋರ್ವ ವ್ಯಕ್ತಿ ಶವವಾಗಿ ಪತ್ತೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯೂ ಕೂಡ ಶವವಾಗಿ ಪತ್ತೆಯಾಗಿದ್ದಾರೆ.

ಪಾಂಡವಪುರಕ್ಕೆ ತೆರಳಿದ್ದ ನಾಲ್ವರು ಕಾರಿನಲ್ಲಿ ಮಂಡ್ಯ ಕಡೆಗೆ ಸೋಮವಾರ(ಫೆ.3) ಹಿಂತಿರುವಾಗ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಉರುಳಿತ್ತು. ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಜೆ ಏರಿಕೆಯಾಗಿದ್ದು, ಇದೀಗ ಹಾಲಹಳ್ಳಿ ಸ್ಲಂ ನಿವಾಸಿ ಪೀರ್‌ ಖಾನ್‌ ಶವವಾಗಿ ಪತ್ತೆಯಾಗಿದ್ದಾರೆ.

ನಿನ್ನೆ ನಡೆದ ಈ ದುರಂತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಪತ್ತೆಯಾಗಿದ್ದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಈ ಕಾರ್ಯಾಚರಣೆಯ ವೇಳೆ ಅಸ್ಲಾಂ ಪಾಷ ಎಂಬುವವರು ನಿನ್ನೆ ಶವವಾಗಿ ಪತ್ತೆಯಾಗಿದ್ದರು. ಆದರೆ ಇಂದು(ಫೆಬ್ರವರಿ.4) ನಾಪತ್ತೆಯಾಗಿದ್ದ ಮತ್ತೋರ್ವ ವ್ಯಕ್ತಿ ಪೀರ್‌ ಖಾನ್‌ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಇನ್ನೂ ನೀರಿನಲ್ಲಿ ಸಾವು-ಬದುಕಿನ ಮಧ್ಯೆ ನಡುವೆ ಹೋರಾಡುತ್ತಿದ್ದ ನಯಾಜ್‌ ಎಂಬಾತನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

Tags: