ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯೂ ಕೂಡ ಶವವಾಗಿ ಪತ್ತೆಯಾಗಿದ್ದಾರೆ.
ಪಾಂಡವಪುರಕ್ಕೆ ತೆರಳಿದ್ದ ನಾಲ್ವರು ಕಾರಿನಲ್ಲಿ ಮಂಡ್ಯ ಕಡೆಗೆ ಸೋಮವಾರ(ಫೆ.3) ಹಿಂತಿರುವಾಗ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಉರುಳಿತ್ತು. ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಜೆ ಏರಿಕೆಯಾಗಿದ್ದು, ಇದೀಗ ಹಾಲಹಳ್ಳಿ ಸ್ಲಂ ನಿವಾಸಿ ಪೀರ್ ಖಾನ್ ಶವವಾಗಿ ಪತ್ತೆಯಾಗಿದ್ದಾರೆ.
ನಿನ್ನೆ ನಡೆದ ಈ ದುರಂತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಪತ್ತೆಯಾಗಿದ್ದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಈ ಕಾರ್ಯಾಚರಣೆಯ ವೇಳೆ ಅಸ್ಲಾಂ ಪಾಷ ಎಂಬುವವರು ನಿನ್ನೆ ಶವವಾಗಿ ಪತ್ತೆಯಾಗಿದ್ದರು. ಆದರೆ ಇಂದು(ಫೆಬ್ರವರಿ.4) ನಾಪತ್ತೆಯಾಗಿದ್ದ ಮತ್ತೋರ್ವ ವ್ಯಕ್ತಿ ಪೀರ್ ಖಾನ್ ಅವರು ಶವವಾಗಿ ಪತ್ತೆಯಾಗಿದ್ದಾರೆ.
ಇನ್ನೂ ನೀರಿನಲ್ಲಿ ಸಾವು-ಬದುಕಿನ ಮಧ್ಯೆ ನಡುವೆ ಹೋರಾಡುತ್ತಿದ್ದ ನಯಾಜ್ ಎಂಬಾತನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.
ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…
ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…