ಮಂಡ್ಯ

ಅಕ್ಟೋಬರ್ 16 ಕ್ಕೆ ಕಾವೇರಿ 5-ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ

ಮಂಡ್ಯ:  ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ. ಕೆ. ಹಳ್ಳಿ ) ಯಲ್ಲಿ ಅಕ್ಟೋಬರ್ 16 ರ ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಸಚಿವರು ಆದಾ ಉಪಮುಖ್ಯಮಂತ್ರಿಗ ಡಿ.ಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಕೇಂದ್ರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯಾವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ, ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಭಾಗವಹಿಸಲಿದ್ದಾರೆ. ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಸಾರಿಗೆ ಮತ್ತು ಮುಜರಾಯಿ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ. ಜಾರ್ಜ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ವಸತಿ ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು, ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವರು ಸುರೇಶ್ ಬಿ.ಎಸ್.(ಭೈರತಿ ) ಹಾಗೂ ಇನ್ನಿತರ ಸಚಿವರು ,ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮನೆ ಮನೆಗೂ ಕಾವೇರಿ ನೀರು ಇದು ಸಮೃದ್ಧ ಬೆಂಗಳೂರು

50 ಲಕ್ಷ ಫಲಾನುಭವಿಗಳು,
4 ಲಕ್ಷ ಸಂಪರ್ಕ,
4336 ಕೋಟಿ ರೂ. ವೆಚ್ಚ
775 ಎಂ. ಎಲ್. ಡಿ ಹೆಚ್ಚುವರಿ ನೀರು ಪೂರೈಕೆಯಾಗಲಿದೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜು, ಯಲಹಂಕ, ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಬೊಮ್ಮನಹಳ್ಳಿ ವಲಯದ ಮನೆ ಮನೆಗೂ ಕಾವೇರಿ ನೀರು ಪೂರೈಕೆಯಾಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

11 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

22 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

45 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

1 hour ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

3 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago