ಮಂಡ್ಯ

ಕಾವೇರಿ ಆರತಿ ಉತ್ತರ-ದಕ್ಷಿಣ ಭಾರತ ಪರಂಪರೆಯ ಸಮ್ಮೀಲನ : ಸುತ್ತೂರು ಸ್ವಾಮೀಜಿ ಅಭಿಮತ

ಕೆಆರ್ ಎಸ್ (ಮಂಡ್ಯ): ಉತ್ತರ, ದಕ್ಷಿಣ ಭಾರತದ ಪರಂಪರೆಯ ಸಮ್ಮೀಲನವಾಗಿರುವ ಕಾವೇರಿ ಆರತಿಯನ್ನು ಮೊದಲ ಬಾರಿಗೆ ಬಹಳ ವಿಶೇಷವಾಗಿ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ. ಕಾವೇರಿ ಆರತಿ ಎಲ್ಲರನ್ನೂ ಒಳಗೊಂಡಿದ್ದು ಪವಿತ್ರ ಭಾವನೆ ಎಲ್ಲರಲ್ಲೂ ಬಂದು ಜನರ ಮನಸಿಗೆ ಮುದ ನೀಡಲಿ ಎಂದು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾಪನ ಮಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಹೇಳಿದರು.

ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿಗಳು ತಮ್ಮ ಕನಸಿನ ಯೋಜನೆಯಾದ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಬರದ ನಾಡನ್ನು ಹಸಿರು ಮಾಡಿದ ಕೆಆರ್ ಎಸ್ ನ ಪವಿತ್ರ ಸ್ಥಳದಲ್ಲಿ ಕಾವೇರಿ ಆರತಿ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ನಾವೆಲ್ಲರೂ ನೆನಪಿಸಿಕೊಳ್ಳಬೇಕು ಎಂದರು.

ಪ್ರಕೃತಿಯನ್ನು ಪೂಜಿಸಿವುದು ನಮ್ಮ ಸಂಸ್ಕೃತಿಯಲ್ಲೇ ಬಂದಿದೆ. ಹರಪ್ಪಾ ಮತ್ತು ಮೊಹೆಂಜದಾರೋ ಕಾಲದಿಂದಲೂ ಇದನ್ನು ಕಾಣಬಹುದು. ಆಧುನಿಕ ಯುಗಮಾನದಲ್ಲೂ ಇದು ಮುಂದುವರೆಯುತ್ತಾ ಬಂದಿದೆ. ಉತ್ತರದ ಗಂಗೆಯಂತೆ ಅಮೆರಿಕದ ಗ್ರ್ಯಾಂಡ್ ಕೆನಲ್ ನದಿಯಂತೆ ಕಾವೇರಿ ವರ್ಷಪೂರ್ತಿ ತುಂಬಿ ಹರಿಯಲಿ ಎಂದು ಆಶಿಸಿದರು.

ಕಾವೇರಿ ಆರತಿ ಮಾಡುವಾಗ ನದಿಯನ್ನು ಅಶುಚಿಗೊಳಿಸುವುದಿಲ್ಲ ಎಂಬ ಸಂಕಲ್ಪ ಮಾಡಬೇಕು. ನದಿಯ ಪಾವಿತ್ರತೆ ಕಾಪಾಡಬೇಕು. ಪ್ರಕೃತಿಯನ್ನು ನಾಶ ಮಾಡಬಾರದು. ಪವಿತ್ರ ಭಾವನೆ ಎಲ್ಲರಲ್ಲೂ ಇರಲಿ ಎಂದು ಹೇಳಿದರು.

ಇದನ್ನೂ ಓದಿ:-ಸಹಸ್ರಾರು ಪ್ರೇಕ್ಷಕರ ಮನಗೆದ್ದ ಡ್ರೋನ್ ಶೋ ; ಭಾರೀ ಮೆಚ್ಚುಗೆ

ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಮಾತನಾಡಿ, ಕಾವೇರಿ ಆರತಿ ಕಾರ್ಯಕ್ರಮಕ್ಕೆ ಮೊದಲು ಅಂಕಿತ ಹಾಕಿದ್ದೇ ದಿನೇಶ್ ಗೂಳಿಗೌಡರು. ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ನೇತೃತ್ವದಲ್ಲಿ ಕಾರ್ಯಕ್ರಮ ರೂಪಿಸಲಾಯಿತು ಎಂದರು.

ಕಾವೇರಿ ಆರತಿಯಿಂದ ಮೌಢ್ಯ ಬಿತ್ತುತ್ತಾರೆ ಎನ್ನುವವರು ಮನೆಯಲ್ಲಿ ಪೂಜೆ ಮಾಡುತ್ತಾರೆ. ಈ ನಾಡಿಗೆ, ಜನತೆಗೆ ಒಳೆಯದಾಗಲಿ ಎಂದು ಕಾವೇರಿ ಆರತಿಯನ್ನು ಮಾಡುತ್ತಿದ್ದರೆ ಅದನ್ನು ವಿರೋಧಿಸುತ್ತಾರೆ. ತಾಯಿ ಒಳ್ಳೆಯದು ಮಾಡಲಿ

ಕಾರ್ಯಕ್ರಮದಲ್ಲಿ ಸಿದ್ದಲಿಂಗಸ್ವಾಮೀಜಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡರು, ಮಾಜಿ ಶಾಸಕಿ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡರ ತಾಯಿ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಹಾಗೂ ಕಾವೇರಿ ನೀರಾವರಿ ನಿಗಮದ ಮಹೇಶ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

30ಕ್ಕೂ ಹೆಚ್ಚು ಸ್ವಾಮೀಜೊಗಳು ಭಾಗಿ

ಕಾವೇರಿ ಆರತಿ- 4ನೇ ದಿನದವಾದ ಇಂದು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಪೀಠಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ‌ ಅವರ‌ ಜೊತೆಗೂಡಿ 30 ಜನಕ್ಕೂ ಹೆಚ್ಚು ಸ್ವಾಮೀಜಿ ಅವರುಗಳು ಬಸ್ ನಲ್ಲಿ ಆಗಮಿಸಿ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸ್ವಾಮೀಜಿ ಅವರನ್ನು ಗೊರವರ ಕುಣಿತ, ಕಂಸಾಳೆ, ಕೊಂಬು ಕಹಳೆ, ಮುಂತಾದ ಜನಪದ ಕಲಾತಂಡಗಳೊಂದಿಗೆ ಆತ್ಮೀಯವಾಗಿ ಮೆರವಣಿಗೆ ಮೂಲಕ ಸ್ವಾಗತಿಸಿದ್ದು ವಿಶೇಷವಾಗಿತ್ತು‌.

ಕರ್ನಾಟಕ ಸಂಸ್ಕೃತಿಯ ಅನಾವರಣ
ಕೆಆರ್ ಎಸ್ ನ ಬೃಂದಾವನದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ “ಕಾವೇರಿ ಆರತಿ” ಕರ್ನಾಟಕದ ಸಂಸ್ಕೃತಿಯ ಅನಾವರಣದ ವೇದಿಕೆಯಾಗಿ ಮಾರ್ಪಟ್ಟಿದೆ..

ಜಾನಪದ ಇತಿಹಾಸ ಹೊಂದಿರುವ ಮಂಡ್ಯ ಜಿಲ್ಲೆಯ ಸೊಗಡನ್ನು ರಾಜ್ಯದ ಜನತೆಗೆ ಉಣಬಡಿಸುವ ಮುಖಾಂತರ ಕಾವೇರಿ ಆರತಿ ರಾಜ್ಯದ ಮನೆಮಾತಾಗಲಾರಂಭಿಸಿದೆ. ನಾಲ್ಕು ದಿನಗಳಲ್ಲಿ ಲಕ್ಷಕ್ಕೂ ಅಧಿಕ ಮಂದಿ ಕಾವೇರಿ ಆರತಿಯನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ಕೆಆರ್ ಎಸ್ ನ ವಿದ್ಯುತ್ ದೀಪಾಲಂಕಾರಕ್ಕೆ ಪ್ರವಾಸಿಗರು ಮನಸೋತಿದ್ದಾರೆ.

ಜಲಕ್ರೀಡೆ, ಸಂಗೀತ ಕಾರಂಜಿಯ ಜೊತೆಗೆ ಚಿಣ್ಣರ ಲೋಕವನ್ನೇ ಸೃಷ್ಟಿಸಿರುವ ಬೃಂದಾವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರಗೊಂಡವು. ವೀರಭದ್ರನ ಕುಣಿತ, ವೀರಗಾಸೆ ಕುಣಿತ, ಪುರವಂತಿಕೆ ಕುಣಿತ ಕಾವೇರಿ ಆರತಿಯ ಸೊಬಗು ಹೆಚ್ಚಿಸಿವೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

4 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

4 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

6 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

6 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

7 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

7 hours ago