ಕೆಆರ್ ಎಸ್ (ಮಂಡ್ಯ): ಉತ್ತರ, ದಕ್ಷಿಣ ಭಾರತದ ಪರಂಪರೆಯ ಸಮ್ಮೀಲನವಾಗಿರುವ ಕಾವೇರಿ ಆರತಿಯನ್ನು ಮೊದಲ ಬಾರಿಗೆ ಬಹಳ ವಿಶೇಷವಾಗಿ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ. ಕಾವೇರಿ ಆರತಿ ಎಲ್ಲರನ್ನೂ ಒಳಗೊಂಡಿದ್ದು ಪವಿತ್ರ ಭಾವನೆ ಎಲ್ಲರಲ್ಲೂ ಬಂದು ಜನರ ಮನಸಿಗೆ ಮುದ ನೀಡಲಿ ಎಂದು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾಪನ ಮಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಹೇಳಿದರು.
ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿಗಳು ತಮ್ಮ ಕನಸಿನ ಯೋಜನೆಯಾದ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಬರದ ನಾಡನ್ನು ಹಸಿರು ಮಾಡಿದ ಕೆಆರ್ ಎಸ್ ನ ಪವಿತ್ರ ಸ್ಥಳದಲ್ಲಿ ಕಾವೇರಿ ಆರತಿ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ನಾವೆಲ್ಲರೂ ನೆನಪಿಸಿಕೊಳ್ಳಬೇಕು ಎಂದರು.
ಪ್ರಕೃತಿಯನ್ನು ಪೂಜಿಸಿವುದು ನಮ್ಮ ಸಂಸ್ಕೃತಿಯಲ್ಲೇ ಬಂದಿದೆ. ಹರಪ್ಪಾ ಮತ್ತು ಮೊಹೆಂಜದಾರೋ ಕಾಲದಿಂದಲೂ ಇದನ್ನು ಕಾಣಬಹುದು. ಆಧುನಿಕ ಯುಗಮಾನದಲ್ಲೂ ಇದು ಮುಂದುವರೆಯುತ್ತಾ ಬಂದಿದೆ. ಉತ್ತರದ ಗಂಗೆಯಂತೆ ಅಮೆರಿಕದ ಗ್ರ್ಯಾಂಡ್ ಕೆನಲ್ ನದಿಯಂತೆ ಕಾವೇರಿ ವರ್ಷಪೂರ್ತಿ ತುಂಬಿ ಹರಿಯಲಿ ಎಂದು ಆಶಿಸಿದರು.
ಕಾವೇರಿ ಆರತಿ ಮಾಡುವಾಗ ನದಿಯನ್ನು ಅಶುಚಿಗೊಳಿಸುವುದಿಲ್ಲ ಎಂಬ ಸಂಕಲ್ಪ ಮಾಡಬೇಕು. ನದಿಯ ಪಾವಿತ್ರತೆ ಕಾಪಾಡಬೇಕು. ಪ್ರಕೃತಿಯನ್ನು ನಾಶ ಮಾಡಬಾರದು. ಪವಿತ್ರ ಭಾವನೆ ಎಲ್ಲರಲ್ಲೂ ಇರಲಿ ಎಂದು ಹೇಳಿದರು.
ಇದನ್ನೂ ಓದಿ:-ಸಹಸ್ರಾರು ಪ್ರೇಕ್ಷಕರ ಮನಗೆದ್ದ ಡ್ರೋನ್ ಶೋ ; ಭಾರೀ ಮೆಚ್ಚುಗೆ
ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಮಾತನಾಡಿ, ಕಾವೇರಿ ಆರತಿ ಕಾರ್ಯಕ್ರಮಕ್ಕೆ ಮೊದಲು ಅಂಕಿತ ಹಾಕಿದ್ದೇ ದಿನೇಶ್ ಗೂಳಿಗೌಡರು. ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ನೇತೃತ್ವದಲ್ಲಿ ಕಾರ್ಯಕ್ರಮ ರೂಪಿಸಲಾಯಿತು ಎಂದರು.
ಕಾವೇರಿ ಆರತಿಯಿಂದ ಮೌಢ್ಯ ಬಿತ್ತುತ್ತಾರೆ ಎನ್ನುವವರು ಮನೆಯಲ್ಲಿ ಪೂಜೆ ಮಾಡುತ್ತಾರೆ. ಈ ನಾಡಿಗೆ, ಜನತೆಗೆ ಒಳೆಯದಾಗಲಿ ಎಂದು ಕಾವೇರಿ ಆರತಿಯನ್ನು ಮಾಡುತ್ತಿದ್ದರೆ ಅದನ್ನು ವಿರೋಧಿಸುತ್ತಾರೆ. ತಾಯಿ ಒಳ್ಳೆಯದು ಮಾಡಲಿ
ಕಾರ್ಯಕ್ರಮದಲ್ಲಿ ಸಿದ್ದಲಿಂಗಸ್ವಾಮೀಜಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡರು, ಮಾಜಿ ಶಾಸಕಿ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡರ ತಾಯಿ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಹಾಗೂ ಕಾವೇರಿ ನೀರಾವರಿ ನಿಗಮದ ಮಹೇಶ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
30ಕ್ಕೂ ಹೆಚ್ಚು ಸ್ವಾಮೀಜೊಗಳು ಭಾಗಿ
ಕಾವೇರಿ ಆರತಿ- 4ನೇ ದಿನದವಾದ ಇಂದು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಪೀಠಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ಜೊತೆಗೂಡಿ 30 ಜನಕ್ಕೂ ಹೆಚ್ಚು ಸ್ವಾಮೀಜಿ ಅವರುಗಳು ಬಸ್ ನಲ್ಲಿ ಆಗಮಿಸಿ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸ್ವಾಮೀಜಿ ಅವರನ್ನು ಗೊರವರ ಕುಣಿತ, ಕಂಸಾಳೆ, ಕೊಂಬು ಕಹಳೆ, ಮುಂತಾದ ಜನಪದ ಕಲಾತಂಡಗಳೊಂದಿಗೆ ಆತ್ಮೀಯವಾಗಿ ಮೆರವಣಿಗೆ ಮೂಲಕ ಸ್ವಾಗತಿಸಿದ್ದು ವಿಶೇಷವಾಗಿತ್ತು.
ಕರ್ನಾಟಕ ಸಂಸ್ಕೃತಿಯ ಅನಾವರಣ
ಕೆಆರ್ ಎಸ್ ನ ಬೃಂದಾವನದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ “ಕಾವೇರಿ ಆರತಿ” ಕರ್ನಾಟಕದ ಸಂಸ್ಕೃತಿಯ ಅನಾವರಣದ ವೇದಿಕೆಯಾಗಿ ಮಾರ್ಪಟ್ಟಿದೆ..
ಜಾನಪದ ಇತಿಹಾಸ ಹೊಂದಿರುವ ಮಂಡ್ಯ ಜಿಲ್ಲೆಯ ಸೊಗಡನ್ನು ರಾಜ್ಯದ ಜನತೆಗೆ ಉಣಬಡಿಸುವ ಮುಖಾಂತರ ಕಾವೇರಿ ಆರತಿ ರಾಜ್ಯದ ಮನೆಮಾತಾಗಲಾರಂಭಿಸಿದೆ. ನಾಲ್ಕು ದಿನಗಳಲ್ಲಿ ಲಕ್ಷಕ್ಕೂ ಅಧಿಕ ಮಂದಿ ಕಾವೇರಿ ಆರತಿಯನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ಕೆಆರ್ ಎಸ್ ನ ವಿದ್ಯುತ್ ದೀಪಾಲಂಕಾರಕ್ಕೆ ಪ್ರವಾಸಿಗರು ಮನಸೋತಿದ್ದಾರೆ.
ಜಲಕ್ರೀಡೆ, ಸಂಗೀತ ಕಾರಂಜಿಯ ಜೊತೆಗೆ ಚಿಣ್ಣರ ಲೋಕವನ್ನೇ ಸೃಷ್ಟಿಸಿರುವ ಬೃಂದಾವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರಗೊಂಡವು. ವೀರಭದ್ರನ ಕುಣಿತ, ವೀರಗಾಸೆ ಕುಣಿತ, ಪುರವಂತಿಕೆ ಕುಣಿತ ಕಾವೇರಿ ಆರತಿಯ ಸೊಬಗು ಹೆಚ್ಚಿಸಿವೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…