ಮಂಡ್ಯ : ಗಂಗಾರತಿ ಮಾದರಿಯಲ್ಲಿ KRS ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ೨೫ ಜನರ ತಂಡ ಕಳುಹಿಸಿ ನಂತರ ವರದಿ ಕೊಡುತ್ತಾರೆ. ಆನಂತರ ಕಾವೇರಿ ಆರತಿ ಕಾರ್ಯಕ್ರಮವನ್ನು ಮಾಡುತ್ತೇವೆ. ಧಾರ್ಮಿಕದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಸೇರಿಕೊಂಡು ಕಾರ್ಯಕ್ರಮ ಮಾಡುತ್ತಾರೆ ಎಂದರು.
ಅಲ್ಲದೆ ಕಾವೇರಿ ಬೃಂದಾವನ ಅಮ್ಯೂಸೆಂಟ್ ಪಾರ್ಕ್ ಮಾಡಲಾಗುತ್ತದೆ. ಏನು ಯೋಜನೆ ಎಂಬುದು ಮುಂದೆ ಗೊತ್ತಾಗುತ್ತದೆ. ಯಾರೂ ಗಾಬರಿ ಆಗುವುದು ಬೇಡ. ಟೀಕೆ ಟಿಪ್ಪಣಿ ಹಾರ ಹಾಕುವವರು, ಕಲ್ಲು ಹೊಡೆಯುವವರು ಎಲ್ಲರೂ ಕೂಡ ಇರುತ್ತಾರೆ. ರಾಜಕಾರಣದಲ್ಲಿ ಇವೆಲ್ಲಾ ಇರುತ್ತದೆ. ಯಾರನ್ನೂ ಒಕ್ಕಲೆಬ್ಬುಸುವುದಿಲ್ಲ. ರಸ್ತೆ ವಿಸ್ತರಣೆ ಮಾಡುತ್ತೇವೆ. ಡ್ಯಾಂ ಸುರಕ್ಷತೆಗೆ ಏನು ಬೇಕೋ ಎಲ್ಲಾ ರೀತಿಯ ಕ್ರಮಗಳನ್ನು ತೆಗದುಕೊಳ್ಳುತ್ತೇವೆ ಎಂದು ಡಿಕೆಶಿ ಹೇಳಿದರು.





