KRS Dam
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ತಗ್ಗಿದ ಪರಿಣಾಮ ಜಲಾಶಯಕ್ಕೆ ನೀರಿನ ಒಳಹರಿವು ತೀವ್ರವಾಗಿ ಕುಂಠಿತಗೊಂಡಿದೆ.
ಪ್ರಸ್ತುತ ಕೆಆರ್ಎಸ್ಗೆ ಕೇವಲ 3,028 ಕ್ಯೂಸೆಕ್ ನೀರು ಒಳಹರಿವಾಗುತ್ತಿದ್ದು, ಹೊರಹರಿವಿನ ಪ್ರಮಾಣ ಬರೋಬ್ಬರಿ 9,253 ಕ್ಯೂಸೆಕ್ಗೆ ಏರಿಕೆಯಾಗಿದೆ. ಎರಡು ದಿನಗಳ ಹಿಂದೆ 7,697 ಕ್ಯೂಸೆಕ್ ಇದ್ದ ಹೊರಹರಿವು ನಿನ್ನೆ 8,544 ಕ್ಯೂಸೆಕ್ಗೆ ಹೆಚ್ಚಳವಾಗಿತ್ತು.
ಒಳಹರಿವಿಗಿಂತ ಮೂರು ಪಟ್ಟು ಅಧಿಕ ನೀರನ್ನು ಹೊರಬಿಡುತ್ತಿರುವ ಪರಿಣಾಮ, ಇತ್ತೀಚೆಗಷ್ಟೇ 111 ಅಡಿಗೆ ತಲುಪಿದ್ದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಇದೀಗ 108.76 ಅಡಿಗೆ ಕುಸಿದಿದೆ.
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…