Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕಾವೇರಿ ವಿಚಾರಣೆ ಮುಂದೂಡಿಕೆ – ಸಂಕಷ್ಟ ಪರಿಸ್ಥಿತಿಯನ್ನು ವಿವರಿಸುವ ಪ್ರಯತ್ನ ಮಾಡುತ್ತೇವೆ : ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು ಹಾಗೂ ಮುಂದಿನ ನಡೆಗಳ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಇಂದು ನಾಗಮಂಗಲ ಜಲಸೂರು ರಸ್ತೆ ಕಾಮಗಾರಿ ವೀಕ್ಷಣೆ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರ ಆದೇಶ ಬರೋ ಆಶಾ ಭಾವನೆ ಇತ್ತು, ಸುಪ್ರೀಂಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 21ಕ್ಕೆ ಮುಂದೂಡಿರೋ ಹಿನ್ನಲೆ ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡಲು ಕಷ್ಟವಾಗುತ್ತದೆ. ಈ ಹಿನ್ನಲೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ರಾಜ್ಯದ ಸಂಕಷ್ಟ ಪರಿಸ್ಥಿತಿಯನ್ನು ವಿವರಿಸುವ ಪ್ರಯತ್ನವನ್ನು ಮತ್ತೆ ನಮ್ಮ ರಾಜ್ಯದ ಪರ ವಕೀಲರ ಮೂಲಕ ಮುಂದೂವರೆಸುವುದಾಗಿ ಸಚಿವರು ತಿಳಿಸಿದರು.

ಕೆ.ಆರ್.ಎಸ್ ಅಣೆಕಟ್ಟಿನಲ್ಲಿ ಸದ್ಯ ಸಂಗ್ರಹವಾಗಿರುವ ನೀರು ಜನರಿಗೆ ಕುಡಿಯುವ ನೀರು ಮಾತ್ರ ಒದಗಿಸಲು ಸಾಧ್ಯವಾಗುತ್ತದೆ‌,ರೈತರ ಬೆಳೆಗಳಿಗೂ ನೀರು ಬಿಡದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆ ಪ್ರಾಧಿಕಾರದ ಗಮನ ಸೆಳೆಯುವ ಪ್ರಯತ್ನ ಮುಂದುವರೆಸುವುದಾಗಿ ಸಚಿವರು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!