ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು ಹಾಗೂ ಮುಂದಿನ ನಡೆಗಳ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಇಂದು ನಾಗಮಂಗಲ ಜಲಸೂರು ರಸ್ತೆ ಕಾಮಗಾರಿ ವೀಕ್ಷಣೆ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರ ಆದೇಶ ಬರೋ ಆಶಾ ಭಾವನೆ ಇತ್ತು, ಸುಪ್ರೀಂಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 21ಕ್ಕೆ ಮುಂದೂಡಿರೋ ಹಿನ್ನಲೆ ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡಲು ಕಷ್ಟವಾಗುತ್ತದೆ. ಈ ಹಿನ್ನಲೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ರಾಜ್ಯದ ಸಂಕಷ್ಟ ಪರಿಸ್ಥಿತಿಯನ್ನು ವಿವರಿಸುವ ಪ್ರಯತ್ನವನ್ನು ಮತ್ತೆ ನಮ್ಮ ರಾಜ್ಯದ ಪರ ವಕೀಲರ ಮೂಲಕ ಮುಂದೂವರೆಸುವುದಾಗಿ ಸಚಿವರು ತಿಳಿಸಿದರು.
ಕೆ.ಆರ್.ಎಸ್ ಅಣೆಕಟ್ಟಿನಲ್ಲಿ ಸದ್ಯ ಸಂಗ್ರಹವಾಗಿರುವ ನೀರು ಜನರಿಗೆ ಕುಡಿಯುವ ನೀರು ಮಾತ್ರ ಒದಗಿಸಲು ಸಾಧ್ಯವಾಗುತ್ತದೆ,ರೈತರ ಬೆಳೆಗಳಿಗೂ ನೀರು ಬಿಡದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆ ಪ್ರಾಧಿಕಾರದ ಗಮನ ಸೆಳೆಯುವ ಪ್ರಯತ್ನ ಮುಂದುವರೆಸುವುದಾಗಿ ಸಚಿವರು ತಿಳಿಸಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…