ಮಂಡ್ಯ: ಕಾವೇರಿ ನದಿ ರಕ್ಷಣಾ ಸಮಿತಿ ವತಿಯಿಂದ ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣವನ್ನು ಬೆಂಗಳೂರಿನ ಕೆ.ಆರ್.ರಸ್ತೆಯ ಕೆಂಪೇಗೌಡ ಆಸ್ಪತ್ರೆ ಆವರಣದಲ್ಲಿನ ಏಪ್ರಿಲ್ ೦೫ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಹೆಚ್.ಕೆ.ರಾಮು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರು ವರ್ಷಗಳ ಹಿಂದೆ ರಚಿಸಲಾದ ಆದೇಶದ ಮೇಲೆ ನೀರು ಹಂಚಿಕೆ ಮಾಡಲಾಗುತ್ತಿದ್ದು, ಸಂಕಷ್ಟ ಸೂತ್ರಗಳನ್ನು ರಚಿಸುವಂತೆ ಒತ್ತಡ ಹೇರಲು ಸಮಿತಿ ಮುಂದಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮಿಜಿ ಉದ್ಘಾಟಿಸಲಿದ್ದು, ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸುವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದ ವಿಪಕ್ಷ ನಾಯಕ ಆರ್.ಅಶೋಕ್, ಸಾರಿ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ, ಲೋಕಸಭಾ ಸದಸ್ಯರಾದ ಡಾ.ಸಿ.ಎನ್.ಮಂಜುನಾಥ್, ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಒಕ್ಕಲಿಗ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಭಾಗವಹಿಸಲಿದ್ದು, ವಿಶ್ರಾಂತ ನ್ಯಾಯಾಧೀಶರಾದ ವಿ.ಗೋಪಾಲಗೌಡ, ಎ.ಜೆ.ಸದಾಶಿವ, ಚಂದ್ರಶೇಕರಯ್ಯ ಘನ ಉಪಸ್ಥಿತಿ ವಹಿಸುವರು ಎಂದರು.
ಬೆಳಿಗ್ಗೆ ೧೧.೩೦ಕ್ಕೆ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮವು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕಾಗಿನೆಲೆ ಮಠದ ನಿರಂಜನಾನಂದಪುರಿ ಸ್ವಾಮೀಜಿ ದಿವ್ಯಸಾನಿಧ್ಯದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಸಚಿವರಾದ ಎನ್.ಚಲುವರಾಯಸ್ವಾಮಿ, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಲೋಕಸಭಾ ಸದಸ್ಯ ಸುನೀಲ್ ಬೋಸ್ ಭಾಗವಹಿಸುವರು ಎಂದು ತಿಳಿಸಿದರು.
ನೀರಾವರಿ ತಜ್ಞರಾದ ವಿಧಾಪರಿಷತ್‌ನ ಮಾಜಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರರಾದ ಜಯಪ್ರಕಾಶ್, ರಾಮಯ್ಯ, ವೆಂಕಟರಾಮು ವಿಷಯ ಮಂಡನೆ ಮಾಡಲಿದ್ದು, ಹಿರಿಯ ವಕೀಲರಾದ ಕೆ.ವಿ.ಧನಂಜಯ, ಆರ್.ಎಸ್.ರವಿ ಕಾವೇರಿ ನದಿ ರಕ್ಷಣೆ ಬಗ್ಗೆ ವಿಷಯ ಮಂಡನೆ ಮಾಡುವರು, ರೈತ ಹೋರಾಟಗಾರರಾದ ಬಡಗಲಪುರ ನಾಗೇಂದ್ರ, ಕುರುಬೂರು ಶಾಂತಕುಮಾರ್, ಸುಣಮದ ಜಯರಾಮ್, ಕೆ.ಬೋರಯ್ಯ, ಅಂಜನರೆಡ್ಡಿ, ಬಿಜ್ಜಾವರ ಹೆಚ್ ಲೋಕೇಶ್ ವಿಷಯ ಮಂಡನೆಯಲ್ಲಿ ಭಾಗವಹಿಸುವರು ಎಂದು ವಿವರಿಸಿದರು.
ಸಂಜೆ ೦೪ಕ್ಕೆ ಸ್ಫಟಿಕಪುರಿ ಮಠದ ನಂಜಾವಧೂತ ಸ್ವಾಮೀಜಿ, ಮಾಧಾರಚೆನ್ನಯ್ಯ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಿ.ಪರಮೇಶ್ವರ್, ಕೇಂದ್ರ ರೈಲ್ವ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್ ಭಾಗವಹಿಸಲಿದ್ದು, ಸಮಿತಿಯ ಪದಾಧಿಕಾರಿಗಳು ಉಪಸ್ಥಿತರರಿಲಿದ್ದಾರೆ ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಸಮಿತಿಯ ಕಾರ್ಯಧ್ಯಕ್ಷರಾದ ಸಿಡಿ ಗಂಗಾಧರ್, ಎಸ್.ಸಿದ್ದರಾಮೇಗೌಡ, ಅಶೋಕ್ ಜಯರಾಮ್, ಸದಸ್ಯರಾದ ಚಿದಂಬರ್, ನಗರಸಭೆ ಮಾಜಿ ಸದಸ್ಯೆ ಪದ್ಮವತಿ, ಸಾತನೂರು ವೇಣು, ಜಗದೀಶ್ ಉಪಸ್ಥಿತರಿದ್ದರು.